MDL Recruitment 2023: ಹಡಗು ನಿರ್ಮಾಣ ಸಂಸ್ಥೆಯಲ್ಲಿ 466 ಹುದ್ದೆಗಳು ಖಾಲಿ
ಹಡಗು ನಿರ್ಮಾಣ ಸಂಸ್ಥೆ (MDL)ಯಲ್ಲಿ ಖಾಲಿ ಇರುವ 466 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಯಾವ ರೀತಿ ಅರ್ಜಿ ಸಲ್ಲಿಸಬೇಕು, ವಯೋಮಿತಿ, ಸಂಬಳದ ವಿವರ, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬಿತ್ಯಾದಿ ವಿವರಗಳನ್ನು ಇಲ್ಲಿ ಪಡೆಯಬಹುದು.
ಇಲಾಖೆ ಹೆಸರು : ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ (MDL)
ಹುದ್ದೆಗಳ ಸಂಖ್ಯೆ : 466
ಹುದ್ದೆಗಳ ಹೆಸರು : ಟ್ರೇಡ್ ಅಪ್ರೆಂಟಿಸ್
ಉದ್ಯೋಗ ವರ್ಗ : ಕೇಂದ್ರ ಸರ್ಕಾರದ ಹುದ್ದೆ

ಸಂಬಳದ ವಿವರ
ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ (MDL) ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.2500-8050/- ಸಂಬಳ ನೀಡಲಾಗುವುದು.
ವಯಸ್ಸಿನ ವಿವರ
• ಕನಿಷ್ಠ ವಯಸ್ಸು : 14 ವರ್ಷಗಳು
• ಗರಿಷ್ಠ ವಯಸ್ಸು : 21 ವರ್ಷಗಳು
ವಯೋಮಿತಿ ಸಡಿಲಿಕೆ ಹೀಗಿದೆ
• OBC ಅಭ್ಯರ್ಥಿಗಳಿಗೆ : 03 ವರ್ಷಗಳು
• SC/ST ಅಭ್ಯರ್ಥಿಗಳಿಗೆ : 05 ವರ್ಷಗಳು
ಅರ್ಜಿ ಶುಲ್ಕ ಎಷ್ಟು?
• ಸಾಮಾನ್ಯ / OBC/ EWS ಅಭ್ಯರ್ಥಿಗಳಿಗೆ : ರೂ. 100/-
• SC/ ST/ PWD ಅಭ್ಯರ್ಥಿಗಳಿಗೆ : ಯಾವುದೇ ಶುಲ್ಕವಿಲ್ಲ

ಶೈಕ್ಷಣಿಕ ಅರ್ಹತೆ ಹೀಗಿರಬೇಕು..
ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ (MDL) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು/ವಿಶ್ವವಿದ್ಯಾಲಯಗಳಿಂದ 8ನೇ,10ನೇ, ITI /ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ ಹೇಗೆ?
ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ
ಆನ್‌ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಗಳು
• ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 05- ಜುಲೈ -2023
• ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27- ಜುಲೈ -2023
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಲಿಂಕ್ https://www.mazagondock.in/ ಗೆ ಭೇಟಿ ನೀಡಿ.












Click it and Unblock the Notifications