245 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ ಎಂಇಸಿಎಲ್
ಬೆಂಗಳೂರು, ಜುಲೈ 24 : ಎಂಇಸಿಎಲ್ 245 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 16, 2018 ಕೊನೆಯ ದಿನವಾಗಿದೆ.
ಖನಿಜ ಸಂಶೋಧನಾ ನಿಗಮ ನಿಯಮಿತ (ಎಂಇಸಿಎಲ್) Jr. Driver, Foreman ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ.
Jr. Driver ಹುದ್ದೆಗೆ ಮೆಟ್ರಿಕ್ಯುಲೇಷನ್ ಅಥವ ತತ್ಸಮಾನ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅಭ್ಯರ್ಥಿಯು ಲಘು ಮತ್ತು ಭಾರೀ ವಾಹನಗಳ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು.

Foreman ಡಿಪ್ಲೊಮಾ ಇನ್ ಡ್ರಿಲ್ಲಿಂಗ್/ಮೆಕಾನಿಕಲ್ ಇಂಜಿನಿಯರಿಂಗ್ ಅನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 25 ಮೇ 2018ಕ್ಕೆ ಅನ್ವಯವಾಗುವಂತೆ.
ಅರ್ಜಿ ಶುಲ್ಕಗಳು
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು 100 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ
Jr. Driver : 19600 - 47900 ಪ್ರತಿ ತಿಂಗಳು
Foreman : 22900 - 55900 ಪ್ರತಿ ತಿಂಗಳು
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications