ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್‌; ಜನವರಿ 7ರಂದು ಬೃಹತ್ ಉದ್ಯೋಗ ಮೇಳ

|
Google Oneindia Kannada News

ಬೀದರ್, ಜನವರಿ 04; ಬೀದರ್‌ನಲ್ಲಿ ಜನವರಿ 7ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. 80ಕ್ಕೂ ಅಧಿಕ ಕಂಪನಿಗಳು ಪಾಲ್ಗೊಳ್ಳುತ್ತಿವೆ.

ಜಿಲ್ಲಾ ಕೌಶಲ ಅಭಿವೃದ್ಧಿ ಕಚೇರಿ ಬೀದರ್ ಮತ್ತು ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

Breaking; ನೇರ ನೇಮಕಾತಿ ಮತ್ತು ಮುಂಬಡ್ತಿ ಬಗ್ಗೆ ಹೊಸ ಸುತ್ತೋಲೆBreaking; ನೇರ ನೇಮಕಾತಿ ಮತ್ತು ಮುಂಬಡ್ತಿ ಬಗ್ಗೆ ಹೊಸ ಸುತ್ತೋಲೆ

ಬೀದರ್ ಜಿಲ್ಲೆಯ ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣವಕಾಶ. ಉದ್ಯೋಗ ಮೇಳದಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

MRPL ಉದ್ಯೋಗ ನೇಮಕಾತಿಯಲ್ಲಿ ಮತ್ತೆ ವಂಚನೆ-ಮುನೀರ್ ಕಾಟಿಪಳ್ಳ ಆರೋಪMRPL ಉದ್ಯೋಗ ನೇಮಕಾತಿಯಲ್ಲಿ ಮತ್ತೆ ವಂಚನೆ-ಮುನೀರ್ ಕಾಟಿಪಳ್ಳ ಆರೋಪ

Mega Job Fair In Bidar On January 7th

ಈ ಉದ್ಯೋಗ ಮೇಳದಲ್ಲಿ 80ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. 4000ಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಈ ಉದ್ಯೋಗ ಮೇಳದ ಪ್ರಯೋಜನ ಪಡೆದುಕೊಳ್ಳಬೇಕು.

ಮಂಡ್ಯದಲ್ಲಿ 2 ತಿಂಗಳೊಳಗೆ ಮತ್ತೊಂದು ಬೃಹತ್ ಉದ್ಯೋಗ ಮೇಳ ಮಂಡ್ಯದಲ್ಲಿ 2 ತಿಂಗಳೊಳಗೆ ಮತ್ತೊಂದು ಬೃಹತ್ ಉದ್ಯೋಗ ಮೇಳ

ಉದ್ಯೋಗ ಮೇಳ ನಡೆಯುವ ಸ್ಥಳ: ದಿನಾಂಕ 7/1/2023ರಂದು ಭೂಮರೆಡ್ಡಿ ಕಾಲೇಜು ಆವರಣ, ಬೀದರ್ ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9480842995, 9008736661, 9071000027 ಕರೆ ಮಾಡಬಹುದಾಗಿದೆ. ಈ ನಂಬರ್‌ಗೆ ಕರೆ ಮಾಡಿ ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ ಅಭಿವೃದ್ಧಿ ಕಚೇರಿ, ನೌಬಾದ ಬೀದರ್ ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ; ಶಿವಮೊಗ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2022-23ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಉದ್ಯೋಗಿನಿ ಯೋಜನೆಯಡಿ ಪ.ಪಂ.ಕ್ಕೆ 3 ಗುರಿಗಳನ್ನು ನಿಗದಿಪಡಿಸಿದ್ದು, ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿಕೈಗಾರಿಕೆ ಇತ್ಯಾದಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆರ್ಥಿಕವಾಗಿ ಹಿಂದುಳಿದ ಅರ್ಹ ಪರಿಶಿಷ್ಟ ಪಂಗಡ 18-55 ವರ್ಷದೊಳಗಿನ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ಮೀರಿರಬಾರದು. ಸಾಲ ಮಂಜೂರಾದ ನಂತರ ಬಿಡುಗಡೆಯ ಮುನ್ನ ಫಲಾನುಭವಿಗಳಿಗೆ ಉದ್ಯಮಶೀಲತಾ ತರಬೇತಿ ಕಡ್ಡಾಯವಾಗಿ ನೀಡಲಾಗುವುದು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಂದ ಪಡೆದು ಸಲ್ಲಿಸಬೇಕಿದೆ.

ಭರ್ತಿ ಮಾಡಿದ ಅರ್ಜಿಯೊಂದಿಗೆ ಆದಾಯ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ/ ಆಧಾರ್ ಕಾರ್ಡ್, ಯೋಜನಾ ವರದಿ, ತರಬೇತಿ ಅಥವಾ ಅನುಭವ ಪತ್ರ, ವಯಸ್ಸಿನ ದೃಢೀಕರಣ ಪತ್ರ ಹಾಗೂ 3 ಇತ್ತೀಚಿನ ಭಾವಚಿತ್ರಗಳನ್ನು ಲಗತ್ತಿಸಬೇಕು.

ಜನವರಿ 17ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 9482031284/ 9901755700 ಕರೆ ಮಾಡಬಹುದಾಗಿದೆ.

English summary
Gurupadappa Nagamarapalli foundation organized mega job fair in Bidar on January 7th. Around 80 companies will participate in job fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X