ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಲಾರದಲ್ಲಿ ಫೆಬ್ರವರಿ 11, 12ರಂದು ಉದ್ಯೋಗ ಮೇಳ

|
Google Oneindia Kannada News

ಕೋಲಾರ, ಜನವರಿ 15 : ಕೋಲಾರ ಜಿಲ್ಲಾಡಳಿತ ಫೆಬ್ರವರಿ 11 ಮತ್ತು 12ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಕೋಲಾರ ಮತ್ತು ಹೊರ ಜಿಲ್ಲೆಗಳ ವಿವಿಧ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

ಕೋಲಾರ ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಈ ಕುರಿತು ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡುವ ಕುರಿತು ಪೂರ್ವಭಾವಿ ಸಭೆಯು ಮಂಗಳವಾರ ನಡೆದಿದೆ.

ಕರ್ನಾಟಕ ಹೈಕೋರ್ಟ್ ನೇಮಕಾತಿ; 851 ಹುದ್ದೆಗಳುಕರ್ನಾಟಕ ಹೈಕೋರ್ಟ್ ನೇಮಕಾತಿ; 851 ಹುದ್ದೆಗಳು

ನಗರದ ಹೊರವಲಯದಲ್ಲಿರುವ ಸಿ.ಬೈರೇಗೌಡ ತಾಂತ್ರಿಕ ವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಮೇಳವನ್ನು ಆಯೋಜಿಸುವ ಕುರಿತು ಶಿಷ್ಟಾಚಾರ, ವೇದಿಕೆ ಹಾಗೂ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.

ರಾಜ್ಯ ಮಾನವ ಹಕ್ಕುಗಳ ಆಯೋಗದ ನೇಮಕಾತಿ, ಅರ್ಜಿ ಹಾಕಿರಾಜ್ಯ ಮಾನವ ಹಕ್ಕುಗಳ ಆಯೋಗದ ನೇಮಕಾತಿ, ಅರ್ಜಿ ಹಾಕಿ

Mega Job Fair In Kolar On February 11 And 12

ಮೇಳದ ಬಗ್ಗೆ ಮಾಹಿತಿ ನೀಡಲು ವೆಬ್‍ಸೈಟ್ ಅಭಿವೃದ್ಧಿ ಸಂಬಂಧ ಎನ್.ಐ.ಸಿ ಕ್ರಮ ವಹಿಸಲಿದ್ದು, ಫೆಬ್ರವರಿ 5ರೊಳಗೆ ಉದ್ಯಮಿಗಳು ಹಾಗು ಉದ್ಯೋಗಾಕಾಂಕ್ಷಿಗಳ ನೋಂದಣಿಯನ್ನು ಈ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುತ್ತದೆ.

ಕೊಪ್ಪಳ; 22 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಹಾಕಿಕೊಪ್ಪಳ; 22 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಹಾಕಿ

ಕೋಲಾರ ಜಿಲ್ಲೆಯ ಎಲ್ಲಾ ಕೈಗಾರಿಕಾ ಕಂಪನಿಗಳು ಸೇರಿದಂತೆ ಹೊರ ಜಿಲ್ಲೆಗಳಿಂದ ಬರುವ ಆಸಕ್ತ ಕಂಪನಿಗಳ ಪಟ್ಟಿಯನ್ನು ತಯಾರಿಸಿ ಮೇಳದಲ್ಲಿ ಸೂಕ್ತ ಸೌಲಭ್ಯ ಒದಗಿಸಲು ಸೂಚನೆ ನೀಡಲಾಗಿದೆ.
ವೇಮಗಲ್, ನರಸಾಪುರ, ಟಮಕ, ಹೊಸಕೋಟೆ ಮತ್ತು ವೈಟ್‍ಫೀಲ್ಡ್‌ಗಳಲ್ಲಿನ ಎಲ್ಲಾ ಕಂಪನಿಗಳನ್ನು ಮೇಳಕ್ಕೆ ಆಹ್ವಾನಿಸಲಾಗುತ್ತದೆ.

ಜಿಲ್ಲೆಯಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಪದವಿ ಕಾಲೇಜುಗಳಿಂದ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಉದ್ಯೋಗಾಕಾಂಕ್ಷಿಗಳು ಹಾಗೂ ಈಗಾಗಲೇ ವಿದ್ಯಾಭ್ಯಾಸ ಪೂರೈಸಿರುವವರು ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಉದ್ಯೋಗ ಮೇಳಕ್ಕೆ ಆಗಮಿಸುವವರಿಗೆ ತಾಲೂಕು ಕೇಂದ್ರ ಸ್ಥಾನದಿಂದ ಕೆಎಸ್ಆರ್‌ಟಿಸಿ ಬಸ್‍ಗಳ ವ್ಯವಸ್ಥೆ ಕಲ್ಪಿಸಲು ಮತ್ತು ಮೇಳ ನಡೆಯುವ ಸ್ಥಳದಲ್ಲಿ ವಾಹನಗಳು ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಲು ಸಹ ಸೂಚನೆ ನೀಡಲಾಗಿದೆ.

English summary
Kolar district administration organized mega job fair on February 11 and 12, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X