ಫೆಬ್ರವರಿ 19ಕ್ಕೆ ಸವದತ್ತಿಯಲ್ಲಿ ಉದ್ಯೋಗ ಮೇಳ

ಫೆಬ್ರವರಿ 19ರಂದು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಬೃಹತ್‌ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಬೆಳಗಾವಿ, ಫೆಬ್ರವರಿ 16; ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಫೆಬ್ರವರಿ 19ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

ಸವದತ್ತಿ ತಾಲೂಕು ಆನಂದ ಚೋಪ್ರಾ ಯುಥ್ಸ್ ಗ್ರೂಪ್ ಹಾಗೂ ಎನಕರೇಜ್ ಗ್ರೂಪ್ ಸವದತ್ತಿ ಸೌರವ್ ಆನಂದ ಚೋಪ್ರಾ ಇವರ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಬೃಹತ್ ಉದ್ಯೋಗ ಮೇಳ ಫೆಬ್ರುವರಿ 19ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯ ತನಕ ನಡೆಯಲಿದೆ. ಆಸಕ್ತ ಯುವಕ/ ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

Mega Job Fair In Savadatti On February 19th

ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಬಿಎ, ಬಿಸಿಎ, ಇಂಜಿನಿಯರಿಂಗ್, ಎಂಬಿಎ, ಎಂಸಿಎ ಯಾವುದೇ ಪದವಿ ಅಥವ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಉದ್ಯೋಗ ಮೇಳಕ್ಕೆ ಬರುವಾಗ ಆಕಾಂಕ್ಷಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲೆಗಳು ಝೆರಾಕ್ಸ್ ಪ್ರತಿ, ರೆಸ್ಯೂಮ್‌ನ ಪ್ರತಿಯನ್ನು ತರುವಂತೆ ಮನವಿ ಮಾಡಲಾಗಿದೆ.

Mega Job Fair In Savadatti On February 19th

ಟಾಟಾ ಮೋಟಾರ್ಸ್, ಟೊಯೋಟಾ, ಪೇಟಿಎಂ, ಚೈತನ್ಯ, ಮುತ್ತೋಟ್ ಫೈನಾನ್ಸ್, ಎಸ್‌ಬಿಐ ಲೈಫ್ ಸೇರಿದಂತೆ 50 ಹೆಚ್ಚು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿವೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9742344287, 9743633157, 9663644287 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಉದ್ಯೋಗ ಮೇಳ ನಡೆಯುವ ಸ್ಥಳ; ಜಿ. ಜಿ. ಚೋಪ್ರಾ ಕಾಲೇಜು ಆವರಣ, ಕರೀಕಟ್ಟಿ ರೋಡ, ಸವದತ್ತಿ.

ನೇರ ಸಂದರ್ಶನ; ಮಾನವ ವಿಕಾಸ ಮತ್ತು ಕುಟುಂಬ ಅಧ್ಯಯನ ವಿಭಾಗ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನ ಕರೆಯಲಾಗಿದೆ.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಮಾರ್ಚ್ 1ರಂದು ಬೆಳಗ್ಗೆ 10. 30 ಗಂಟೆಗೆ ವಿದ್ಯಾಧಿಕಾರಿಗಳು, ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಕೃಷಿ ವಿಶ್ವವಿದ್ಯಾಲಯ ಧಾರವಾಡ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನಕ್ಕೆ ಬರುವಾಗ ಎರಡು ದೃಡೀಕೃತ ಪ್ರತಿಗಳೊಂದಿಗೆ ಪಾಸ್‌ಪೋರ್ಟ್‌ ಅಳತೆಯ ಫೋಟೋಗಳನ್ನು ಲಗತ್ತಿಸಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಸಂದರ್ಶನದ ಸಮಯದಲ್ಲಿ ಹಾಜರುಪಡಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಅರ್ಜಿ ನಮೂನೆ ಹಾಗೂ ಅಧಿಸೂಚನೆಗಾಗಿ http://www.uasd.edu ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+