MESCOM Recruitment 2023: ಮಂಗಳೂರಿನಲ್ಲಿ 200 ಹುದ್ದೆಗಳು ಖಾಲಿ ಇವೆ, ಕೂಡಲೇ ಅರ್ಜಿ ಹಾಕಿ
ಬೆಂಗಳೂರು, ಆಗಸ್ಟ್ 20: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್(MESCOM) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಂಗಳೂರಿನಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಸೆಪ್ಟೆಂಬರ್ 12 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ.
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (MESCOM) ಒಟ್ಟು ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಂಗಳೂರಿನಲ್ಲಿಯೆ ಪೋಸ್ಟಿಂಗ್ ನೀಡಲಾಗುವುದು ಎಂಧು ಮೆಸ್ಕಾಂ ತಿಳಿಸಿದೆ. ಅರ್ಜಿ ಸಲ್ಲಿಕೆಗೂ ಮೊದಲು ನೇಮಕಾತಿ ಪ್ರಕ್ರಿಯೆ, ಮಾಸಿಕ ವೇತನ, ಅರ್ಜಿ ಸಲ್ಲಿಕೆ ವಿವರ ತಿಳಿಯಿರಿ.

ನೇಮಕಾತಿ ವಿವರ
ಸಂಸ್ಥೆ - ಮೆಸ್ಕಾಂ
ಹುದ್ದೆ ಹೆಸರು- ಅಪ್ರೆಂಟಿಸ್
ಖಾಲಿ ಹುದ್ದೆ- 200
ವೇತನ ಮಾಸಿಕ- 9,000 ರೂಪಾಯಿ
ಸಂದರ್ಶನ - ಸೆ. 12
ಜನರಲ್ ಸ್ಟೀಮ್ ಗ್ರಾಜುಯೇಟ್ ಅಪ್ರೆಂಟಿಸ್- 65
ಗ್ರಾಜುಯೇಟ್ ಅಪ್ರೆಂಟಿಸ್- 70
ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್- 65
ಶೈಕ್ಷಣಿಕ ಅರ್ಹತೆ
ಜನರಲ್ ಸ್ಟೀಮ್ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ ಬಿಎ, ಬಿ.ಎಸ್ಸಿ, ಬಿ.ಕಾಂ, ಬಿಸಿಎ ಮತ್ತು ಬಿಬಿಎ ಪದವಿ ಪೂರ್ಣಗೊಳಿಸರಬೇಕು. ಇನ್ನೂ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿಇ ಇಲ್ಲವೇ ಬಿ.ಟೆಕ್ ಪದವಿ ಹಾಗೂ ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್ ಡಿಪ್ಲೊಮಾ ಕೋರ್ಸ್ ಪೂರ್ಣಗೊಳಿಸಿರಬೇಕು ಎಂದು ಮೆಸ್ಕಾಂ ಅಧಿಸೂಚನೆ ಹೊರಡಿಸಿದೆ.
ಮಾಸಿಕ ವೇತನ
ಜನರಲ್ ಸ್ಟೀಮ್ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾಗುವರಿಗೆ ಮಾಸಿಕ 9,000 ರೂಪಾಯಿ. ಗ್ರಾಜುಯೇಟ್ ಅಪ್ರೆಂಟಿಸ್ ಮಾಸಿಕ 9,000 ರೂಪಾಯಿ ಮತ್ತು ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್ ಮಾಸಿಕ 8,000 ರೂಪಾಯಿ ವೇತನ ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ಯಾವುದೇ ವರ್ಗದವರಿಗೂ ಶುಲ್ಕ ನಿಗದಿ ಮಾಡಿಲ್ಲ ಎಂದು ಅಧಿಸೂಚನೆ ತಿಳಿಸಿದೆ.

ಆಯ್ಕೆ ಹೇಗೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವರು ಮೆರಿಟ್ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಸೆಪ್ಟೆಂಬರ್ 12 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಈ ಅಧಿಕೃತ ವೆಬ್‌ಸೈಟ್ https://mescom.karnataka.gov.in/page/RECRUITMENT/en ಗೆ ಸಂಪರ್ಕಿಸಬೇಕು ಎಂದು ತಿಳಿಸಿದೆ.












Click it and Unblock the Notifications