441 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಮೆಸ್ಕಾಂ
ಮಂಗಳೂರು, ಜನವರಿ 11 : ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15, 2016.
ಒಟ್ಟು 441 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಜನವರಿ 16ರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

64 ಸಹಾಯಕ ಇಂಜಿನಿಯರ್, 41 ಸಹಾಯಕ ಲೆಕ್ಕಾಧಿಕಾರಿ, 95 ಕಿರಿಯ ಇಂಜಿನಿಯರ್, 7 ಕಿರಿಯ ಇಂಜಿನಿಯರ್ (ಸಿವಿಲ್), 122 ಸಹಾಯಕ, 74 ಕಿರಿಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಯಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15, 2016 ಸಂಜೆ 5 ಗಂಟೆ. ಜನವರಿ 16ರ ನಂತರ ಹುದ್ದೆಗಳ ವರ್ಗೀಕರಣ, ಮೀಸಲಾತಿ, ಅರ್ಹತೆ ಮುಂತಾದ ವಿವರಗಳನ್ನು http://www.mesco.in/ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.
ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ : ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 1638 ಹುದ್ದೆಗಳಿದ್ದು ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಫೆಬ್ರವರಿ 5, 2016.[ವಿವರಗಳು ಇಲ್ಲಿವೆ]












Click it and Unblock the Notifications