ಬಳ್ಳಾರಿ: ಮೇ 27ರಂದು ಮಿನಿ ಉದ್ಯೋಗ ಮೇಳ
ಬಳ್ಳಾರಿ, ಮೇ 25: ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮೇ 27ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಈ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಮೇ 27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ 4 ರಿಂದ 5 ಕಂಪನಿಗಳು ಭಾಗವಹಿಸುತ್ತಿವೆ.

ಕಂಪನಿಗಳು ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಉಚಿತವಾಗಿ ಭಾಗವಹಿಸಬಹುದು.
ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (RESUME) ಗಳೊಂದಿಗೆ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಆಗಮಿಸಬಹುದು.
ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಅಥವಾ ಮೊಬೈಲ್ ಸಂಖ್ಯೆ 9742718891, 8277000619ಗೆ ಸಂಪರ್ಕಿಬಹುದು.
ತರಬೇತಿಗೆ ಅರ್ಜಿ ಆಹ್ವಾನ: 2024-25ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆ ಸೊರಬದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಇನ್ಪಾರ್ಮೆಷನ್ ಮತ್ತು ಕಮ್ಯೂನಿಕೇಷನ್ ಟೆಕ್ನಾಲಜಿ ಸಿಸ್ಟಮ್ ಮೇಂಟೆನೆನ್ಸ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಹುದ್ದೆಗಳಿಗೆ ತರಬೇತಿ ನೀಡಲಾಗುತ್ತದೆ.
ಆಸಕ್ತ ಆಭ್ಯರ್ಥಿಗಳು www.cite.karnataka.gov.in ಆನ್‍ಲೈನ್‍ನಲ್ಲಿ ಜೂನ್ 3ರೊಳಗಾಗಿ ಸಲ್ಲಿಸುವುದು ಹಾಗೂ ಆಯ್ಕೆ ಮಾಡಿಕೊಂಡ ಸರ್ಕಾರಿ ಐಟಿಐ ಗಳಲ್ಲಿ ಮೂಲ ದಾಖಲಾತಿ ಹಾಗೂ ದೃಢೀಕೃತ ದಾಖಲೆಗಳ ಪ್ರತಿಗಳೊಂದಿಗೆ ತೆರಳಿ ನಿಗದಿತ ದಿನಾಂಕದೂಳಗೆ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳುವುದು ಹಾಗೂ ಪಿಪಿಪಿ ಸೀಟುಗಳ ಪ್ರವೇಶಕ್ಕಾಗಿ ಖುದ್ದಾಗಿ/ ಕಛೇರಿ ದೂರವಾಣಿ ಸಂಖ್ಯೆ ಮೂಲಕ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08184-290005 ಕರೆ ಮಾಡಿ.
ಅರ್ಜಿ ಆಹ್ವಾನ: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಪ್ ಕೋ-ಅಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯು ರಾಜ್ಯದ ಸಹಕಾರ ಸಂಘದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದೂರಶಿಕ್ಷಣ-ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕುರಿತು 6 ತಿಂಗಳ ತರಬೇತಿಯನ್ನು ಪ್ರಾರಂಭಿಸುತ್ತಿದೆ.
ಈ ತರಬೇತಿ ಪಡೆಯಲು ಇಚ್ಛಿಸುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಗಳನ್ನು ಕರ್ನಾಟಕ ಇನ್‍ಸ್ವಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ ವಿನೋಬನಗರ, 2ನೇ ಹಂತ ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಜೂನ್ 15ರೊಳಗಾಗಿ ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-248873/ 7022429440 ಅಥವಾ www.kscfdcm.co.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.












Click it and Unblock the Notifications