ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿ; ಸೆಪ್ಟೆಂಬರ್ 8ರಂದು ಮಿನಿ ಉದ್ಯೋಗ ಮೇಳ

|
Google Oneindia Kannada News

ಬಳ್ಳಾರಿ, ಸೆಪ್ಟೆಂಬರ್ 06; ಬಳ್ಳಾರಿ ಜಿಲ್ಲೆ ಉದ್ಯೋಗ ವಿನಿಮಯ ಕಚೇರಿ ಸೆಪ್ಟೆಂಬರ್ 8ರಂದು ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಿದೆ. ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಗುರುವಾರ ಬೆಳಗ್ಗೆ 10 ಗಂಟೆಗೆ ಕೆಸಿ ರೋಡ್‍ನ ನಿಸರ್ಗ ಹೋಟೆಲ್ ಹತ್ತಿರದ ಚೇಂಬರ್ ಆಫ್ ಕಾಮರ್ಸ್ ಬಿಲ್ಡಿಂಗ್‍ನ ಎರಡನೇ ಫ್ಲೋರ್‌ನಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕಲಬುರಗಿ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಕಲಬುರಗಿ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಕನೆಕ್ಟ್ ಬಿಜಿನೆಸ್ ಸೊಲ್ಯೂಷನ್ ಲಿಮಿಟೆಡ್ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ ಎಂದು ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ. ಎಸ್. ಹಟ್ಟಪ್ಪ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿ: ಅಂಚೆ-ಕಚೇರಿಯಲ್ಲಿ ಕಾರು ಚಾಲಕರಿಗೆ 63,000 ಸಂಬಳ ಅರ್ಜಿ ಸಲ್ಲಿಸಿ: ಅಂಚೆ-ಕಚೇರಿಯಲ್ಲಿ ಕಾರು ಚಾಲಕರಿಗೆ 63,000 ಸಂಬಳ

Mini Job Fair In Ballari On September 8th

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಪಿಯುಸಿ, ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಳ್ಗೊಳ್ಳಬಹುದಾಗಿದೆ.

ಐಐಐಟಿ ಬೆಂಗಳೂರು ನೇಮಕಾತಿ 2022: ಸಿಸ್ಟಮ್ ಇಂಜಿನಿಯರ್ ಹುದ್ದೆಗಳಿವೆಐಐಐಟಿ ಬೆಂಗಳೂರು ನೇಮಕಾತಿ 2022: ಸಿಸ್ಟಮ್ ಇಂಜಿನಿಯರ್ ಹುದ್ದೆಗಳಿವೆ

ಅಭ್ಯರ್ಥಿಗಳು ಕನ್ನಡ ಇಂಗ್ಲಿಷ್ ಮತ್ತು ತೆಲುಗು ಭಾಷೆಯ ಸಂವಹನ ಕೌಶಲ್ಯ ಹೊಂದಿರಬೇಕು. ತಮ್ಮ ಆಧಾರ್ ಕಾರ್ಡ್ ಪ್ರತಿ, ಮತ್ತು ಸ್ವ-ವಿವರಗಳೊಂದಿಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 8073365184, 9019692898.

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ: ವಿಜಯನಗರ ಜಿಲ್ಲೆ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನೆಯಡಿ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ 15 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 48 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.

ಹುದ್ದೆಗಳಿಗೆ ಆನ್‍ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರು ಅರ್ಜಿಗಳನ್ನು ಸೆಪ್ಟೆಂಬರ್ 7ರಿಂದ ಅಕ್ಟೋಬರ್ 6ರ ಸಂಜೆ 5.30ರ ತನಕ ಸಲ್ಲಿಸಬಹುದಾಗಿದೆ. ವೆಬ್‍ಸೈಟ್ www.anganwadirecruit.kar.nic.in

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅಡುಗೆ ಸಹಾಯಕ ಹುದ್ದೆಗಳಿಗೆ ನೇಮಕಾತಿ; ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ವಿವಿಧ ಸರ್ಕಾರಿ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಖಾಲಿ ಇರುವ ಅಡುಗೆ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೊಪ್ಪಳ ನಗರದ ರೈಲ್ವೇ ಸ್ಟೇಷನ್ ಎದುರುಗಡೆ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರ್ದಾರ್ ಗಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಗಣೇಶ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಯೋನಿವೃತ್ತಿಯಿಂದ ಖಾಲಿಯಾಗಿರುವ ಅಕ್ಷರ ದಾಸೋಹ ಅಡುಗೆ ಸಹಾಯಕ ಸಿಬ್ಬಂದಿಯನ್ನು ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಸೆಪ್ಟೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವವರು ಆಯಾ ವಾರ್ಡಿನ ನಿವಾಸಿಯಾಗಿರಬೇಕು, ಆ ವಾರ್ಡಿನ ಮತದಾರರ ಪಟ್ಟಿಯಲ್ಲಿ ಹೆಸರಿರಬೇಕು ಮತ್ತು ಅರ್ಜಿಯೊಂದಿಗೆ ಚಾಲ್ತಿ ವರ್ಷದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಇತ್ತೀಚಿನ ಎರಡು ಭಾವಚಿತ್ರಗಳು, ಅರ್ಜಿದಾರರ ಕುಟುಂಬದ ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಚುನಾವಣೆ ಗುರುತಿನ ಚೀಟಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಕೊಪ್ಪಳದ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

English summary
Ballari district employment exchange office organized job fair on September 8th. Candidates who passed PUC and Degree can attend the job fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X