ಕೊಪ್ಪಳ; ಗಂಗಾವತಿಯಲ್ಲಿ ಜನವರಿ 12ರಂದು ಉದ್ಯೋಗ ಮೇಳ
ಕೊಪ್ಪಳ, ಜನವರಿ 11: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜನವರಿ 12ರಂದು ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಜನವರಿ 12ರ ಶುಕ್ರವಾರ ಗಂಗಾವತಿಯ ಬಸ್ ನಿಲ್ದಾಣದ ಹತ್ತಿರವಿರುವ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರ ತನಕ ಮಿನಿ ಜಾಬ್ ಫೇರ್ ನಡೆಯಲಿದೆ.

ಈ ಮಿನಿ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ವಿವಿಧ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.
ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿಯುಸಿ ಅಥವಾ ತತ್ಸಮಾನ, ಐಟಿಐ, ಮತ್ತು ಡಿಪ್ಲೋಮಾ, ಯಾವುದೇ ಪದವಿ ಪಡೆದಿರಬೇಕು. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 35 ವರ್ಷಗಳು.
ಅರ್ಹ ವಿದ್ಯಾರ್ಹತೆ ಹೊಂದಿದ ಯುವಕ ಮತ್ತು ಯವತಿಯರು, ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡ್ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 8105693234.
ಅರೆಕಾಲಿಕ ಉಪನ್ಯಾಸಕರ ನೇಮಕಾತಿ; ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಶಿವಮೊಗ್ಗದ ಸೊರಬದ ಸರ್ಕಾರಿ ಪಾಲಿಟೆಕ್ನಿಕ್‍ನ ಇ ಅಂಡ್ ಸಿ ಮತ್ತು ಆಟೋಮೊಬೈಲ್ ವಿಭಾಗಗಳ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ನಡೆಸಲು ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಇ ಇನ್ ಇ ಅಂಡ್ ಸಿ ಮತ್ತು ಬಿ.ಇ ಇನ್ ಆಟೋಮೊಬೈಲ್ಸ್‍ನಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಪ್ರಮಾಣ ಪತ್ರ, ರೆಸ್ಯೂಮ್, ಫೋಟೊ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9482587139, 9449379331, 9449573321 ಅನ್ನು ಸಂಪರ್ಕಿಸಬಹು ಎಂದು ಸೊರಬ ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಚಾರ್ಯರು ತಿಳಿಸಿದ್ದಾರೆ.












Click it and Unblock the Notifications