ಶಿವಮೊಗ್ಗದಲ್ಲಿ ನವೆಂಬರ್ 29ರಂದು ಮಿನಿ ಉದ್ಯೋಗ ಮೇಳ
ಶಿವಮೊಗ್ಗ, ನವೆಂಬರ್ 26 : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 29ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜಿಸಿದೆ. 10ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿದ್ದು, ನಿರುದ್ಯೋಗಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.
ನವೆಂಬರ್ 29ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ನಿರುದ್ಯೋಗಿ ಯುವಕ/ಯುವತಿಯರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಪ್ರವೇಶ ಉಚಿತ.
ಈ ಮಿನಿ ಉದ್ಯೋಗ ಮೇಳದಲ್ಲಿ 10 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದೆ.

ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗ ಮೇಳ ನಡೆಯುವ ವಿಳಾಸ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ 2ನೇ ಕ್ರಾಸ್, ಶಿವಮೊಗ್ಗ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255293/ 8762778408/ 9535312531 ಸಂಪರ್ಕಿಸಬಹುದಾಗಿದೆ.












Click it and Unblock the Notifications