ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ ಹುದ್ದೆಗಳ ಭರ್ತಿ ಬಗ್ಗೆ.. ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್ 8: ರಾಜ್ಯದಲ್ಲಿ ನಾಲ್ಕು ಸಾರಿಗೆ ನಿಗಮಗಳಿದ್ದು, ಇವುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ, ಎಷ್ಟು ಹುದ್ದೆಗಳು ಖಾಲಿ ಇವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ, ಬಿಎಂಟಿಸಿ ನಾಲ್ಕು ಸಾರಿಗೆ ನಿಗಮಗಳಿವೆ. ಇವುಗಳಲ್ಲಿ ಇರುವ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಪ್ಡೇಟ್ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ ಎಷ್ಟು ಹಾಗೂ ಯಾವ ಹುದ್ದೆಗಳು ಎನ್ನುವ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಕೆಎಸ್‌ಆರ್‌ಟಿಸಿ ಸೇರಿದಂತೆ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಬಿಎಂಟಿಸಿ ಎಂಬ ನಾಲ್ಕು ಸಾರಿಗೆ ನಿಗಮಗಳಿವೆ. ಈ ಪೈಕಿ ಬಿಎಂಟಿಸಿ ರಾಜ್ಯ ರಾಜಧಾನಿ ಬೆಂಗಳೂರಿನ ಜೀವನಾಡಿ ಸಾರಿಗೆ ಆಗಿದೆ. ಈ ನಾಲ್ಕು ಸಾರಿಗೆ ನಿಗಮಗಳಲ್ಲಿ ಖಾಲಿ ಇರುವ 2,736 ಅಧಿಕಾರಿ, ನೌಕರರ ಹುದ್ದೆಗಳ ಭರ್ತಿಗೆ ಅನುಮತಿ ನೀಡುವಂತೆ ಕೋರಿ ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಕೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕಲಬುರಗಿಯಲ್ಲಿ ತಿಳಿಸಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ದಿಂದ 5,00,00,000 ಕೋಟಿ ರೂಪಾಯಿ ವೆಚ್ಚದಲ್ಲಿ ಪಟ್ಟಣದಲ್ಲಿ ನಿರ್ಮಾಣ ಆಗಲಿರುವ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. 2016ರಿಂದ 2023ರ ವರೆಗೆ ನೇಮಕಾತಿ ಇಲ್ಲದ ಕಾರಣ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಆಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಂಸ್ಥೆಯಲ್ಲಿ 1,000 ಅನುಕಂಪದ ಹುದ್ದೆಗಳು ಸೇರಿದಂತೆ ಇದುವರೆಗೂ 10,000 ನೌಕರರನ್ನು ನೇಮಕಾತಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.
ಉತ್ತಮ ಹಣಕಾಸಿನ ಪರಿಸ್ಥಿತಿ ಹೊಂದಿರುವ ಸಾರಿಗೆ ನಿಗಮ: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪೈಕಿ ಉತ್ತಮ ಹಣಕಾಸಿನ ಪರಿಸ್ಥಿತಿ ಹೊಂದಿರುವ ಸಾರಿಗೆ ನಿಗಮನ ಅಂದ್ರೆ, ಅದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ (ಕೆಕೆಆರ್‌ಟಿಸಿ). ಎರಡು ವರ್ಷಗಳ ಅವಧಿಯಲ್ಲಿ ನಿಗಮಕ್ಕೆ 1,031 ಎಕ್ಸ್‌ಪ್ರೆಸ್, ಸ್ಲೀಪರ್ ಬಸ್‌ಗಳನ್ನು ಒದಗಿಸಿದ್ದೇವೆ. ಪ್ರಸಕ್ತ ವರ್ಷ ಕೆಎಸ್‌ಆರ್‌ಟಿಸಿಗೆ 900, ವಾಯುವ್ಯ ಸಾರಿಗೆ ನಿಗಮಕ್ಕೆ 700, ಕೆಕೆಆರ್‌ಟಿಸಿಗೆ 400 ಬಸ್ ನೀಡಿದ್ದೇವೆ ಎಂದು ಹೇಳಿದರು.
ದಿನದಿಂದ ಪ್ರಯಾಣಿಕೆ ಸಂಖ್ಯೆ ಹಚ್ಚಾಗುತ್ತಲಿದೆ. ಈ ಹಿನ್ನೆಲೆ ಹೆಚ್ಚಿನ ಬಸ್‌ಗಳ ಖರೀದಿಗೆ ಆರ್ಥಿಕ ನೆರವು ನೀಡುವಂತೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಕೋರಿಕೆ ಸಲ್ಲಿಕೆ ಮಾಡಲಾಗುವುದು ಎಂದು ಹೇಳಿದರು. ಈ ಸಾರಿಗೆಯಲ್ಲಿ ಪ್ರತಿನಿತ್ಯ ಏನಲ್ಲಾ ಅಂದ್ರೂ ಸಾವಿರಾರು ಮಂದಿ ಪ್ರಯಾಣ ಮಾಡುತ್ತಲಿರುತ್ತಾರೆ. ಅದರಲ್ಲೂ ಕಾಂಗ್ರಸ್ ಸರ್ಕಾರ ಜಾರಿ ಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದ್ದು, ಇದರಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದು ಜಾರಿ ಆದಾಗಿನಿಂದ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗಿದೆ ಅಂದ್ರೆ ತಪ್ಪಗಲಾರದು.












Click it and Unblock the Notifications