ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಸರ್ಕಾರ ಪ್ರತಿ ತಿಂಗಳು 16 ಲಕ್ಷ ಉದ್ಯೋಗ ಸೃಷ್ಟಿಸಿದೆ

|
Google Oneindia Kannada News

ನವದೆಹಲಿ, ನವೆಂಬರ್ 23: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಸುಮಾರು 16 ಲಕ್ಷ ಉದ್ಯೋಗ ಸೃಷ್ಟಿಯಾಗುತ್ತಿವೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಂಗಳವಾರ ಹೇಳಿದ್ದಾರೆ.

ಅಜ್ಮೀರ್‌ನಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಆಯೋಜಿಸಿದ್ದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, "ನರೇಂದ್ರ ಮೋದಿ ಸರ್ಕಾರದಲ್ಲಿ ಪ್ರತಿ ತಿಂಗಳು ಸುಮಾರು 16 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುತ್ತಿದೆ ಮತ್ತು ಪಾರದರ್ಶಕತೆ ಮೋದಿ ಸರ್ಕಾರದ ಮೊದಲ ಆದ್ಯತೆಯಾಗಿದೆ" ಎಂದರು.

ಪ್ರಧಾನಿ ನರೇಂದ್ರ ಮೋದಿಯಿಂದ 71,000 ಜನರಿಗೆ ನೇಮಕಾತಿ ಪತ್ರ ವಿತರಣೆ ಪ್ರಧಾನಿ ನರೇಂದ್ರ ಮೋದಿಯಿಂದ 71,000 ಜನರಿಗೆ ನೇಮಕಾತಿ ಪತ್ರ ವಿತರಣೆ

ಯುವಕರ ಉದ್ಯೋಗಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಆಗಾಗ್ಗೆ ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಳ್ಳುತ್ತವೆ. ಸರ್ಕಾರ ಸಾಕಷ್ಟು ಉದ್ಯೋಗ ಸೃಷ್ಟಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

Modi Government Has Created 16 Lakh Jobs Every Month: Ashwini Vaishnaw

ಇದೀಗ ನರೇಂದ್ರ ಮೋದಿ ಸರ್ಕಾರದ ಸಚಿವ ಅಶ್ವಿನಿ ವೈಷ್ಣವ್ ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. "ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಭಾರತವು ಅವಕಾಶಗಳಿಂದ ತುಂಬಿರುವ ಶಕ್ತಿ ಕೇಂದ್ರವಾಗಿ ಹೊರಹೊಮ್ಮಿದೆ. ಸರಾಸರಿಯಾಗಿ ಪ್ರತಿ ತಿಂಗಳು ಸುಮಾರು 15-16 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿವೆ" ಎಂದು ಕೇಂದ್ರ ಸಚಿವರು ತಿಳಿಸಿದರು.

ಯುವಕರಿಗೆ ನೇಮಕಾತಿ ಪತ್ರ ವಿತರಣೆ; ಮೋದಿ ಸರಕಾರದ ಅನೇಕ ಯೋಜನೆಗಳಿಂದ ಎಲ್ಲ ವರ್ಗದವರ ಬದುಕು ಸುಗಮವಾಗಿದೆ. ರಾಷ್ಟ್ರ ಮೊದಲು ಎಂಬ ಮಂತ್ರವನ್ನು ಯುವಕರು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ ಅವರು, ತಮ್ಮ ಕರ್ತವ್ಯದಲ್ಲಿ ರಾಷ್ಟ್ರಕ್ಕೆ ಮೊದಲ ಆದ್ಯತೆ ನೀಡಿದವರು ಮಾತ್ರ ಜೀವನದಲ್ಲಿ ಗೆದ್ದಿದ್ದಾರೆ ಎಂದು ಹೇಳಿದರು.

ಉದ್ಯೋಗ ಮೇಳದ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ 71,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ನೀಡುವ ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಪ್ರಾರಂಭಿಸಿದರು.

Modi Government Has Created 16 Lakh Jobs Every Month: Ashwini Vaishnaw

ಇದೇ ವೇಳೆ ಪ್ರಧಾನಿ ಮೋದಿ ಕರ್ಮಯೋಗಿ ಇಂಡಕ್ಷನ್ ಮಾಡ್ಯೂಲ್ ಅನ್ನು ಪ್ರಾರಂಭಿಸಿದರು. ಈ ಯೋಜನೆ ಎಲ್ಲಾ ಹೊಸ ನೇಮಕಾತಿಗಳಿಗಾಗಿ ಆನ್‌ಲೈನ್ ಓರಿಯಂಟೇಶನ್ ಕೋರ್ಸ್ ಆಗಿರುತ್ತದೆ.

English summary
Highlighting the Centre's efforts in creating employment opportunities, Union Railway Minister Ashwini Vaishnaw said that about 16 lakh jobs are being generated every month by the central government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X