ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ 58,000ಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಹುದ್ದೆ ಖಾಲಿ
ನಿವೃತ್ತಿಗಳು, ರಾಜೀನಾಮೆಗಳು, ಬಡ್ತಿಗಳು ಮತ್ತು ಹೊಸ ಹುದ್ದೆಗಳ ಸೃಷ್ಟಿಯಿಂದಾಗಿ ಕೇಂದ್ರ ಸರ್ಕಾರದಿಂದ ನಡೆಸಲ್ಪಡುವ ಉನ್ನತ ಶಿಕ್ಷಣದ ಸಂಸ್ಥೆಗಳಲ್ಲಿ 58,000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಉಳಿದಿವೆ.
ನವದೆಹಲಿ, ಫೆಬ್ರವರಿ 7: ಕೇಂದ್ರ ಸರ್ಕಾರದಿಂದ ನಡೆಸಲ್ಪಡುವ ಉನ್ನತ ಶಿಕ್ಷಣದ ಸಂಸ್ಥೆಗಳಲ್ಲಿ 58,000ಕ್ಕೂ ಹೆಚ್ಚು ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ಲೋಕಸಭೆಯಲ್ಲಿ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಮಾಹಿತಿ ನೀಡಿದ್ದಾರೆ.
ನಿವೃತ್ತಿಗಳು, ರಾಜೀನಾಮೆಗಳು, ಬಡ್ತಿಗಳು ಮತ್ತು ಹೊಸ ಹುದ್ದೆಗಳ ಸೃಷ್ಟಿಯಿಂದಾಗಿ ಹುದ್ದೆಗಳು ಖಾಲಿ ಉಳಿದಿವೆ ಎಂದು ಸಚಿವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ವಿವಿಧ ಶಾಲೆಗಳು ಮತ್ತು ಸಂಸ್ಥೆಗಳಲ್ಲಿ ಶಾಲಾವಾರು ಖಾಲಿ ಹುದ್ದೆಗಳ ಪಟ್ಟಿ ಇಂತಿದೆ:
1. ಕೇಂದ್ರೀಯ ವಿದ್ಯಾಲಯಗಳು: 12,099 ಬೋಧನಾ ಹುದ್ದೆಗಳು, 1,312 ಬೋಧಕೇತರ ಹುದ್ದೆಗಳು ಖಾಲಿ ಇವೆ.
2. ಜವಾಹರ್ ನವೋದಯ ವಿದ್ಯಾಲಯಗಳು: 3,271 ಬೋಧಕ ಹುದ್ದೆಗಳು, 1,756 ಬೋಧಕೇತರ ಹುದ್ದೆಗಳು ಖಾಲಿ ಇವೆ.

3. ಕೇಂದ್ರೀಯ ವಿಶ್ವವಿದ್ಯಾಲಯಗಳು: 6,180 ಬೋಧನಾ ಹುದ್ದೆಗಳು, 15,798 ಬೋಧಕೇತರ ಹುದ್ದೆಗಳು ಖಾಲಿ ಇವೆ.
4. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ): 4,425 ಬೋಧನಾ ಹುದ್ದೆಗಳು, 5,052 ಬೋಧಕೇತರ ಹುದ್ದೆಗಳು ಖಾಲಿ ಇವೆ.
5. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸೈನ್ಸ್ ಅಂಡ್ ಟೆಕ್ನಾಲಜಿ: 2,089 ಬೋಧನಾ ಹುದ್ದೆಗಳು, 3,773 ಬೋಧಕೇತರ ಹುದ್ದೆಗಳು ಖಾಲಿ ಇವೆ.
6. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಅಂಡ್ ರಿಸರ್ಚ್: 353 ಬೋಧನಾ ಹುದ್ದೆಗಳು, 625 ಬೋಧಕೇತರ ಹುದ್ದೆಗಳು ಖಾಲಿ ಇವೆ.
7. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್: 1,050 ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ತಿಳಿದು ಬಂದಿದೆ.












Click it and Unblock the Notifications