MRPL Recruitment 2023: ಸರ್ಕಾರಿ ಉದ್ಯೋಗವಕಾಶ, ಎಲ್ಲಿ, ವೇತನವೆಷ್ಟು? ತಿಳಿಯಿರಿ
ಬೆಂಗಳೂರು, ಜುಲೈ 30: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಮುಂದಿನ ತಿಂಗಳ ಆಗಸ್ಟ್ 10 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಒಟ್ಟು 70 ಅಪ್ರೆಂಟಿಸ್ ಟ್ರೈನಿ (Apprentice Trainee) ಹುದ್ದೆಗಳ ಭರ್ತಿ ಪ್ರಕ್ರಿಯೆ ಅರ್ಜಿ ಆಹ್ವಾನಿಸಿದೆ. ರಾಜ್ಯ ಸರ್ಕಾರ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅಧಿಸೂಚನೆ ತಿಳಿಸಿದೆ.

ಆಸಕ್ತರು ಅರ್ಜಿ ಸಲ್ಲಿಕೆಗೂ ಮುನ್ನ ಇಲ್ಲಿ ನೀಡಲಾಗಿರುವ ಖಾಲಿ ಹುದ್ದೆಗಳ ಮಾಹಿತಿ, ವೇತನ, ಶೈಕ್ಷಣಿಕ ಅರ್ಹತೆ ಸೇರಿದಂತೆ ವಿವಿಧ ಅಂಶಗಳನ್ನು ಇಲ್ಲಿ ತಿಳಿಯಿರಿ.
ನೇಮಕಾತಿ ಪೂರ್ಣ ವಿವರ
ಹುದ್ದೆ ಹೆಸರು -ಅಪ್ರೆಂಟಿಸ್ ಟ್ರೈನಿ
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ- 35
ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ- 35
ಒಟ್ಟು ಹುದ್ದೆ ಸಂಖ್ಯೆ - 70
ವಿದ್ಯಾರ್ಹತೆ - BE/ B.Tec, Deploma
ಮಾಸಿಕ ವೇತನ - ರೂ.8,000 ದಿಂದ 10,000 ರೂಪಾಯಿ.
ಉದ್ಯೋಗದ ಸ್ಥಳ - ಮಂಗಳೂರು
ಶೈಕ್ಷಣಿಕ ಅರ್ಹತೆ ಏನಿರಬೇಕು
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು. ಇನ್ನೂ
ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಸೇರಬಯಸುವವರು ಡಿಪ್ಲೊಮಾ ಮುಗಿಸಿರಬೇಕು ಎಂದು ತಿಳಿಸಲಾಗಿದೆ.

ವೇತನ- ವಯಸ್ಸಿನ ಮಿತಿ ಮಾಹಿತಿ
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಆಯ್ಕೆಯಾಗುವವರಿಗೆ ಮಾಸಿಕ 10,000 ರೂಪಾಯಿ ವೇತನ ನಿಗದಿಯಾಗಿದೆ. ಇನ್ನೂ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಮಾಸಿಕ 8000 ರೂಪಾಯಿಯನ್ನು ಕಂಪನಿ ನೀಡಲಿದೆ. ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ತಿಳಿಸಿದೆ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳು (ಮೆರಿಟ್) ಆಧಾರದಲ್ಲಿ ನೇಮಕಾತಿ ನಡೆಯಲಿದ್ದು, ಬಳಿಕ ದಾಖಲೆಗಳ ಪರಿಶೀಲನೆ ಸಹ ಇರಲಿದೆ. ಅಭ್ಯರ್ಥಿಗಳು ಈ https://mrplapps.mrpl.co.in/GAT2022UI/ ವೆಬ್‌ಸೈಟ್ ಮೂಲಕ ಆನ್ಲೈನ್ ನಲ್ಲಿ ಆಗಸ್ಟ್ 10ರೊಳಗೆ ಅರ್ಜಿ ಸಲ್ಲಿಸಬೇಕು.











Click it and Unblock the Notifications