26 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಎಂಎಸ್‌ಟಿಸಿ
ಬೆಂಗಳೂರು, ಅಕ್ಟೋಬರ್ 08 : ಕೇಂದ್ರ ಸರ್ಕಾರಿ ಸ್ವಾಮ್ಯದ ಎಂಎಸ್‌ಟಿಸಿ 26 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 21 ಅಕ್ಟೋಬರ್ 2018 ಕೊನೆಯ ದಿನವಾಗಿದೆ.
Metal Scrap Trade Corporation Limited (MSTC) ಜ್ಯೂನಿಯರ್ ಕಂಪ್ಯೂಟರ್ ಅಸಿಸ್ಟೆಂಟ್, ಡ್ರೈವರ್ ಸೇರಿದಂತೆ 26 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.
ಜ್ಯೂನಿಯರ್ ಕಂಪ್ಯೂಟರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ 6 ತಿಂಗಳ ಡಿಪ್ಲೊಮಾ ಕೋರ್ಸ್ ಮಾಡಿರಬೇಕು. ವೇತನ 17500-30070 ಪ್ರತಿ ತಿಂಗಳು.

ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸ್ ಆಗಿರಬೇಕು. ವೇತನ 17100-25540 ರೂ. ಪ್ರತಿ ತಿಂಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 21 ಅಕ್ಟೋಬರ್ 2018ಕ್ಕೆ ಅನ್ವಯವಾಗುವಂತೆ.
ಅರ್ಜಿ ಶುಲ್ಕ
ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಲಿಖಿತ ಪರೀಕ್ಷೆ, ಸಾಮರ್ಥ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನವೆಂಬರ್ 11, 2018.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications