ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಫೆಬ್ರವರಿ 11 : ಮೈಸೂರು ಜಿಲ್ಲಾ ಪಂಚಾಯಿತಿ ಮೂರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆ. 16, 2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಮೈಸೂರು ಜಿಲ್ಲಾ ಪಂಚಾಯಿತಿ District Consultants ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಫೆ.16ರೊಳಗೆ 45 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇನ್‌ಫರ್‌ಮೇಶನ್ ಎಜುಕೇಶನ್ ಎಂಡ್ ಕಮ್ಯುನಿಕೇಷನ್ ಕನ್ಸಲ್ಟೆಂಟ್ 1 ಹುದ್ದೆ, ಎಚ್‌ಆರ್‌ಡಿ/ಕ್ಯಾಪಾಸಿಟಿ ಬಿಲ್ಡಿಂಗ್ ಕನ್ಸಲ್ಟೆಂಟ್ 1 ಹುದ್ದೆ, ಸ್ಯಾನಿಟೇಷನ್ & ಹೈಜಿನ್ 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಎಲ್ಲಾ ಹುದ್ದೆಗಳನ್ನು 11 ತಿಂಗಳ ಅವಧಿಗೆ ಭರ್ತಿ ಮಾಡಲಾಗುತ್ತಿದೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಬೆಂಗಳೂರು ಮೂಲಕ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಫೆ.16ರೊಳಗೆ ಕಳಿಸಬೇಕು. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಗಳನ್ನು ಸಲ್ಲಿಸಲು ವಿಳಾಸ
Chief Executive Officer
Zilla Panchayat Mysore
Mysuru Bullward Road
Mysore - 570 001
ನೇಮಕಾತಿ ಆದೇಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications