ಮೈಸೂರಿನಲ್ಲಿ ಕೆಲಸ ಖಾಲಿ ಇದೆ; 16 ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಫೆಬ್ರವರಿ 24 : ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 16 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 19, 2020 ಕೊನೆಯ ದಿನವಾಗಿದೆ.

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ಮಾಡಬೇಕಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಆಯ್ಕೆಯಾದವರಿಗೆ ತಿಂಗಳಿಗೆ 27,650 ರೂ. ನಿಂದ 52,650 ರೂ. ವೇತನ ನಿಗದಿ ಮಾಡಲಾಗಿದೆ.

Mysuru Court Stenographer Recruitment 2020

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪ್ರವರ್ಗ 2ಎ/ 2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಸರ್ಕಾರಿ ಸೇವೆಯಲ್ಲಿ ಇರುವವರು, ವಿಧವೆಯರು, ಮಾಜಿ ಸೈನಿಕರು, ಅಂಗವಿಕಲರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದವರು 300 ರೂ., ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು 150 ರೂ. ಶುಲ್ಕ ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಸಕ್ತ ಅಭ್ಯರ್ಥಿಗಳು ಮೈಸೂರು ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಶುಲ್ಕವನ್ನು ಪಾವತಿ ಮಾಡಲು ಏಪ್ರಿಲ್ 19, 2020 ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+