ಮೈಸೂರಿನಲ್ಲಿ ಕೆಲಸ ಖಾಲಿ ಇದೆ; ಜೂನ್ 7ರ ತನಕ ಅರ್ಜಿ ಹಾಕಿ
ಮೈಸೂರು, ಏಪ್ರಿಲ್ 28; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೈಸೂರು ಶೀಘ್ರಲಿಪಿಗಾರರು-ಗ್ರೇಡ್ 3 ಹಿಂಬಾಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 4/7/2023 ಕೊನೆಯ ದಿನವಾಗಿದೆ.
ಮೈಸೂರು ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 11 ಶೀಘ್ರಲಿಪಿಗಾರರು ಗ್ರೇಡ್-3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 27,650 ರಿಂದ 52,650 ರೂ.ಗಳು ಎಂದು ಅಧಿಸೂಚನೆ ಹೇಳಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮೊ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು (Typewriting Senior) ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (Shorthand Senior) ಪರೀಕ್ಷೆಯಲ್ಲಿ ಅಥವಾ ಡಿಪ್ಲೊಮೊ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ನೂತನ ಪಿಂಚಣಿ ಯೋಜನೆ, ವಯೋಮಿತಿ; ಆಯ್ಕೆಯಾದ ಅಭ್ಯರ್ಥಿಗಳು (ಎನ್‌ಪಿಎಸ್) ನೂತನ ಪಿಂಚಣಿ ಯೋಜನೆಗೆ ಒಳಪಡಲಿದ್ದಾರೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷಗಳನ್ನು ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35, 2ಎ/ 2ಬಿ/ 3ಎ/ 3ಬಿ 38 ವರ್ಷ. ಪ. ಜಾ/ ಪ. ಪಂ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ, ಕನ್ನಡ ಭಾಷಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು ಎಂದು ಸ್ಪಷ್ಟಪಡಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು ರೂ. 150 ಶುಲ್ಕವನ್ನು ಪಾವತಿ ಮಾಡಬೇಕು. ಸಾಮಾನ್ಯ ವರ್ಗದವರು ರೂ. 300 ಶುಲ್ಕವನ್ನು ಪಾವತಿಸಬೇಕು.
ಆಯ್ಕೆ ವಿಧಾನ; ಅರ್ಹತಾ ಪರೀಕ್ಷೆಯಲ್ಲಿ ನೇಮಕಾತಿ ಪ್ರಾಧಿಕಾರದಿಂದ ನೇಮಿಸಲಾದ ಪರೀಕ್ಷಕರು 1 ನಿಮಿಷಕ್ಕೆ 120 ಪದಗಳ ದರದಲ್ಲಿ ತಲಾ 5 ನಿಮಿಷಗಳ ಕನ್ನಡ ಮತ್ತು ಆಂಗ್ಲ ಉಕ್ತಲೇಖನವನ್ನು ನೀಡುವರು. ಅದನ್ನು ಅಭ್ಯರ್ಥಿಗಳು 45 ನಿಮಿಷಗಳಲ್ಲಿ ವಿಶೇಷ ತಂತ್ರಾಂಶದ ಗಣಕಯಂತ್ರದಲ್ಲಿ ಬೆರಳಚ್ಚು ಮಾಡತಕ್ಕದ್ದು. ವಿಶೇಷ ತಂತ್ರಾಶದ ಗಣಕಯಂತ್ರದ ಲಿಂಕ್ ಅನ್ನು ಅರ್ಹತಾ ಪರೀಕ್ಷೆ ನಡೆಸುವುದಕ್ಕಿಂತ ಕೆಲವು ದಿನಗಳ ಮೊದಲು ವೆಬ್‌ಸೈಟ್‌ನಲ್ಲಿ ಅಭ್ಯಾಸಕ್ಕಾಗಿ ಪ್ರಕಟಿಸಲಾಗುತ್ತದೆ.
ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007 ಮತ್ತು 2021ರ ಅನ್ವಯ ನೇರ ನೇಮಕಾತಿಯ ಮೂಲಕ ನಡೆಸಲಾಗುತ್ತದೆ.
ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಅಂಕಗಳ ಶೇಕಡಾವಾರು ಅಂಕಗಳು ಮತ್ತು ನಿಮಿಷ ಒಂದಕ್ಕೆ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಬೆರಳಚ್ಚುಯಂತ್ರ/ ಕಂಪ್ಯೂಟರ್ ನಲ್ಲಿ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಅಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಅದರಲ್ಲಿ ತೇರ್ಗಡೆಯಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು ಮತ್ತು ಸಂದರ್ಶನವು 5 ಅಂಕಗಳನ್ನೊಳಗೊಂಡಿರುತ್ತದೆ. 1:5 ಅನುಪಾತದಂತೆ ಸಂದರ್ಶನಕ್ಕೆ ಅಭ್ಯರ್ಥಿಗಳನ್ನು ಕರೆಯಲಾಗುವುದು.












Click it and Unblock the Notifications