ಮೈಸೂರು ನ್ಯಾಯಾಲಯದಲ್ಲಿ 15 ಹುದ್ದೆಗಳು ಖಾಲಿ ಇವೆ

ಬೆಂಗಳೂರು, ಡಿಸೆಂಬರ್ 24 : ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 15 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 14/2/2019 ಕೊನೆಯ ದಿನವಾಗಿದೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ 15 ಆದೇಶ ಜಾರಿಕಾರರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ : 10ನೇ ತರಗತಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

Mysuru District Court Recruitment 18 post

ವಯೋಮಿತಿ : ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು. ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ, 2ಬಿ, 3ಎ, 3ಬಿ ವರ್ಗಕ್ಕೆ 38 ವರ್ಷ. ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರ : ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 100 ರೂ., ಸಾಮಾನ್ಯ ವರ್ಗದವರಿಗೆ 200 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕವನ್ನು ಅರ್ಜಿ ಸಲ್ಲಿಸಿದ ಬಳಿಕ ಸಿಗುವ ಲಿಂಕ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಲೆಲ್ಟ್‌ ಮೂಲಕ ಪಾವತಿ ಮಾಡಬಹುದು. ಶುಲ್ಕವನ್ನು ಪಾವತಿ ಮಾಡಲು 17/2/2019 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿ, ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+