ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂಚೆ ಇಲಾಖೆಯಲ್ಲಿ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಮೈಸೂರು, ಜನೆವರಿ 2: ಭಾರತೀಯ ಅಂಚೆ ಇಲಾಖೆಯ ನಂಜನಗೂಡು ವಿಭಾಗದಲ್ಲಿ ಖಾಲಿ ಇರುವ 78 ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 20, 2021 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ:

ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕನಿಷ್ಠ ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು ಮತ್ತು ಕನ್ನಡ ಭಾಷೆ ಓದಲು, ಬರೆಯಲು ಹಾಗೂ ಮಾತನಾಡಲು ಬರಬೇಕು. ಕನಿಷ್ಠ ಕಂಪ್ಯೂಟರ್ ಜ್ಞಾನ ಮತ್ತು ಪ್ರಮಾಣ ಪತ್ರ ಹೊಂದಿರಬೇಕು.

ವಯೋಮಿತಿ:

ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18-40 ವರ್ಷಗಳಾಗಿರಬೇಕು. ಎಸ್.ಸಿ ಮತ್ತು ಎಸ್.ಟಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 3 ವರ್ಷ, ಹಾಗೂ ಪಿಡಬ್ಲ್ಯೂಡಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷ ಸಡಲಿಕೆ ಇರುತ್ತದೆ.

Mysuru: Invitation To Apply For Dak Service In The Postal Department

ಅರ್ಜಿ ಶುಲ್ಕ:

ಇತರ ಹಿಂದುಳಿದ ವರ್ಗಗಳು ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಶುಲ್ಕ ರೂ.100 ವಿಧಿಸಿದ್ದು, ಮಹಿಳಾ ಅಭ್ಯರ್ಥಿಗಳಿಗೆ, ತೃತೀಯ ಲಿಂಗಿಗಳಿಗೆ, ವಿಕಲಚೇತನರಿಗೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ರಾಜ್ಯದ ಯಾವುದೇ ಮುಖ್ಯ ಅಂಚೆ ಕಛೇರಿಯಲ್ಲಿ ಅಥವಾ ಆಯ್ದ ಅಂಚೆ ಕಚೇರಿಗಳ ಕೌಂಟರ್ ಗಳಲ್ಲಿ ಶುಲ್ಕ ಪಾವತಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಸರನ್ನು http://appost.in/gdsonline ವೆಬ್‍ಸೈಟ್ ಮೂಲಕ ನೋಂದಾಯಿಸಬಹುದಾಗಿದೆ. ಹೆಚ್ಚಿನ ವಿವರಗಳು ವೆಬ್‍ಸೈಟ್‍ನಲ್ಲಿ ಲಭ್ಯವಿರುತ್ತದೆ ಎಂದು ನಂಜನಗೂಡು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.

English summary
The Indian Postal Department has invited applications for 78 vacancies in rural Dak-service in the Nanjanagud section.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X