ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರು ಮಹಾನಗರ ಪಾಲಿಕೆಯಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 13: ಮೈಸೂರು ನಗರದಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕೋವಿಡ್ ಪರೀಕ್ಷೆಗಳನ್ನು ನಡೆಸಲು ಪ್ರಯೋಗಶಾಲಾ ತಂತ್ರಜ್ಞರು/swab collectors ಮತ್ತು ಡೇಟಾ ಎಂಟ್ರಿ ಆಪರೇಟರ್ ಗಳ ತಾತ್ಕಾಲಿಕ ಹುದ್ದೆಗೆ ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಲ್ಯಾಬ್ ಟೆಕ್ನಿಷಿಯನ್, ನರ್ಸಿಂಗ್ ಮತ್ತು ಅರೆ ವೈದ್ಯಕೀಯ ಪದವೀಧರರು, ಡಿಪ್ಲೊಮಾದಾರರು ಮತ್ತು ವಿಜ್ಞಾನ ಪದವೀಧರರು 20 ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಗೊಂಡವರಿಗೆ ಮಾಸಿಕ 10,000 ರೂ. ಹಾಗೂ ಒಂದು ಸ್ವಾಬ್ ಕಲೆಕ್ಷನ್ ‍ಗೆ 15 ರೂ. ನಂತೆ ನೀಡಲಾಗುವುದು.

ಹಾಸನದಲ್ಲಿ ಕೆಲಸ ಖಾಲಿ ಇದೆ; ನ.10ರೊಳಗೆ ಅರ್ಜಿ ಹಾಕಿಹಾಸನದಲ್ಲಿ ಕೆಲಸ ಖಾಲಿ ಇದೆ; ನ.10ರೊಳಗೆ ಅರ್ಜಿ ಹಾಕಿ

20 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಾಗಿ ಅರ್ಜಿ ಸಲ್ಲಿಸಲು ಬಯಸುವವರು ಪಿಯುಸಿ ಹಾಗೂ ಕನಿಷ್ಠ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದು, 6 ತಿಂಗಳ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಈ ಹುದ್ದೆಗೆ ಮಾಸಿಕ 14,000 ರೂ. ನೀಡಲಾಗುವುದು.

Mysuru Municipal Corporation Call To Apply For Lab Technicians And DEO

Recommended Video

Sriramulu ಎರಡು ವರುಷ ಇಂದ ಕೇಳ್ತಿದಿನಿ | Oneindia Kannada

ಈ ಹುದ್ದೆಗಳನ್ನು ಮೂರು ತಿಂಗಳ ಅವಧಿಗೆ ಹಾಗೂ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಪಾಲಿಕೆಯ ಆಯುಕ್ತರ ಕಚೇರಿಯನ್ನು ಸಂಪರ್ಕಿಸುವಂತೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಗುರುದತ್ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
In the wake of increasing coronavirus cases, applications have been invited for a temporary post of laboratory technicians and data entry operators from Mysuru municipal corporation
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X