ಮೈಸೂರು ಜಿಲ್ಲಾ ಪಂಚಾಯಿತಿ ನೇಮಕಾತಿ; ವಿವಿಧ ಹುದ್ದೆಗಳು

ಮೈಸೂರು, ಡಿಸೆಂಬರ್ 20; ಮೈಸೂರು ಜಿಲ್ಲಾ ಪಂಚಾಯತಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 30/12/2022 ಕೊನೆಯ ದಿನವಾಗಿದೆ.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ತಾಲೂಕು ತಾಂತ್ರಿಕ ಸಹಾಯಕ ಅಭಿಯಂತರರು, ಐಇಸಿ, ತಾಂತ್ರಿಕ ಸಂಯೋಜಕರು, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆ, ಆಡಳಿತ ಸಹಾಯಕರ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು mysore.nic.in ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಬಹದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಹುದ್ದೆಗಳ ವಿವರ; ತಾಂತ್ರಿಕ ಸಹಾಯಕ ಅಭಿಯಂತರರು (4). ಗರಿಷ್ಠ ವಯೋಮಿತಿ 40 ವರ್ಷಗಳು. ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 2-3 ವರ್ಷ ಅನುಭವ ಹೊಂದಿರಬೇಕು. ಮಾಸಿಕ ವೇತನ ರೂ. 24,000 ರೂ.ಗಳು.

ಐಇಸಿ (ಮಾಹಿತಿ ಶಿಕ್ಷಣ ಸಂವಹನ) 1 ಹುದ್ದೆ. ಗರಿಷ್ಠ 40 ವರ್ಷಗಳು. ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 2-3 ವರ್ಷಗಳ ಅನುಭವ ಹೊಂದಿರಬೇಕು. ಮಾಸಿಕ ವೇತನ 24,000 ರೂ.ಗಳು.

Mysuru Zilla Panchayat Recruitment Apply For Various Post

ತಾಂತ್ರಿಕ ಸಂಯೋಜಕರು (2). ಗರಿಷ್ಠ ವಯೋಮಿತಿ 40 ವರ್ಷಗಳು. ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 2-3 ವರ್ಷಗಳ ಅನುಭವ ಹೊಂದಿರಬೇಕು. ಮಾಸಿಕ ವೇತನ ರೂ. 29,000 ರೂ.ಗಳು.

ತಾಂತ್ರಿಕ ಸಹಾಯಕರು (ಕೃಷಿ ಇಲಾಖೆ) 4. ತಾಂತ್ರಿಕ ಸಹಾಯಕರು (ತೋಟಗಾರಿಕಾ ಇಲಾಖೆ) 10. ತಾಂತ್ರಿಕ ಸಹಾಯಕರು (ಅರಣ್ಯ ಇಲಾಖೆ) 6. ತಾಂತ್ರಿಕ ಸಹಾಯಕರು (ರೇಷ್ಮೆ ಇಲಾಖೆ) 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಆಡಳಿತ ಸಹಾಯಕರು (8) ಹುದ್ದೆಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 17,600 ನಿಗದಿ ಮಾಡಲಾಗಿದೆ.

ಈ ಹುದ್ದೆಗಳು ತಾತ್ಕಾಲಿಕವಾಗಿವೆ. ಮೆರಿಟ್ ಆಧಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ 1:3 ಆಧಾರದಲ್ಲಿ ಅಭ್ಯರ್ಥಿಗಳಿಗೆ ದೂರವಾಣಿ ಮೂಲಕ ದಾಖಲಾತಿ ಪರಿಶೀಲನೆಗೆ ದಿನಾಂಕ ನಿಗದಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಮಾಡುವ ಪ್ರತಿಯೊಬ್ಬ ಅಭ್ಯರ್ಥಿಯು ಹುದ್ದೆಗೆ ಸಮರ್ಥಿಸುವ ಮೂಲ ದಾಖಲಾತಿಗಳು, ಅಂಕಪಟ್ಟಿ, ಪ್ರಮಾಣ ಪತ್ರಗಳು ಇತ್ಯಾದಿ ಸಂಬಂಧಪಟ್ಟ ಅಂಗೀಕೃತ ಸಂಸ್ಥೆಯಿಂದ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ತಪ್ಪಿದಲ್ಲಿ ಅರ್ಜಿಯು ತಿರಸ್ಕಾರವಾಗಲಿದೆ.

ಹುದ್ದೆಗೆ ನಿಗದಿಪಡಿಸಿದ ಮಾಹಿತಿಯನ್ನು/ ದಾಖಲಾತಿಗಳನ್ನು ಆನ್‌ಲೈನ್‌ನಲ್ಲಿಯೇ ತಿಳಿಯದೇ ತಪ್ಪು ಮಾಹಿತಿ ನೀಡಿದಲ್ಲಿ ಅರ್ಜಿ ತಿರಸ್ಕಾರವಾಗಲಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಧಿಕಾರವು ಈ ಕೆಳಕಂಡ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟಿರುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 9980001309.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+