ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಿದ ನ್ಯಾಕ್, ಬೆಂಗಳೂರಲ್ಲಿ ಕೆಲಸ
ಬೆಂಗಳೂರು, ನವೆಂಬರ್ 28 : ನ್ಯಾಷನಲ್ ಅಸೆಸ್ಮೆಂಟ್ ಅಂಡ್ ಅಕ್ರೆಡಿಟೇಶನ್ ಕೌನ್ಸಿಲ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಸ್ಫೀಡ್ ಪೋಸ್ಟ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 4/12/2018 ಕೊನೆಯ ದಿನವಾಗಿದೆ.
ನ್ಯಾಷನಲ್ ಅಸೆಸ್ಮೆಂಟ್ ಅಂಡ್ ಅಕ್ರೆಡಿಟೇಶನ್ ಕೌನ್ಸಿಲ್ (ಎನ್ಎಎಸಿ) ಡೆಪ್ಯೂಟಿ ಅಡ್ವೈಸರ್, ಪ್ರೊಫೆಷನಲ್ ಅಸಿಸ್ಟೆಂಟ್, ಸೆಮಿ-ಪ್ರೊಫೆಷನಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.
ಪದವಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನ್ಯಾಕ್ ಅಧಿಸೂಚನೆ 2018ರ ಪ್ರಕಾರ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮಾತ್ರ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು 4/12/2018 ಕೊನೆಯ ದಿನವಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ ಗುರುತಿನ ಚೀಟಿಯ ಫೋಟೋ ಪ್ರತಿಗಳೊಂದಿಗೆ, ಡೇಟ್ ಆಫ್ ಬರ್ತ್, ವಿದ್ಯಾಭ್ಯಾಸದ ಪ್ರಮಾಣ ಪತ್ರಗಳೊಂದಿಗೆ, ಜಾತಿ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿಗಳನ್ನು ಸಲ್ಲಿಸಲು ವಿಳಾಸ
To Administrative Officer,
National Assessment and Accreditation Council (NAAC),
Nagarbhayi. Bengaluru- 560 072
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications