ಪದವೀಧರರಿಗೆ ನಬಾರ್ಡ್‌ನಲ್ಲಿ ಕೆಲಸವಿದೆ ಅರ್ಜಿ ಹಾಕಿ
ಬೆಂಗಳೂರು, ಸೆಪ್ಟೆಂಬರ್ 04 : ನಬಾರ್ಡ್ 62 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲು ಸೆಪ್ಟೆಂಬರ್ 13, 2018 ಕೊನೆಯ ದಿನವಾಗಿದೆ.
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಡೆವಲಪ್‌ಮೆಂಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪದವಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ಯಾವುದೇ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಶೇ 50ರಷ್ಟು ಅಂಕಗಳೊಂದಿಗೆ ಪದವಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಆಗಸ್ಟ್ 2018ಕ್ಕೆ ಅನ್ವಯವಾಗುವಂತೆ. ವೇತನ ಶ್ರೇಣಿ 14650 ಪ್ರತಿ ತಿಂಗಳು.
ಅರ್ಜಿಗಳನ್ನು ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧರಿಗೆ 50 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಇತರ ಅಭ್ಯರ್ಥಿಗಳಿಗೆ 450 ರೂ.ಗಳು.
ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications