ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪದವೀಧರರಿಗೆ ನಬಾರ್ಡ್‌ನಲ್ಲಿ ಕೆಲಸವಿದೆ ಅರ್ಜಿ ಹಾಕಿ

By Gururaj
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 04 : ನಬಾರ್ಡ್ 62 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲು ಸೆಪ್ಟೆಂಬರ್ 13, 2018 ಕೊನೆಯ ದಿನವಾಗಿದೆ.

ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಡೆವಲಪ್‌ಮೆಂಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.

ಬಿಎಚ್‌ಇಎಲ್‌ನಲ್ಲಿ 529 ಅಪ್ರೇಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಬಿಎಚ್‌ಇಎಲ್‌ನಲ್ಲಿ 529 ಅಪ್ರೇಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪದವಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ಯಾವುದೇ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಶೇ 50ರಷ್ಟು ಅಂಕಗಳೊಂದಿಗೆ ಪದವಿ ಉತ್ತೀರ್ಣರಾಗಿರಬೇಕು.

ಬೆಂಗಳೂರು ಜಲಮಂಡಳಿ ನೇಮಕಾತಿ ಇಂದಿನಿಂದ ಅರ್ಜಿ ಹಾಕಿ, 270 ಹುದ್ದೆಬೆಂಗಳೂರು ಜಲಮಂಡಳಿ ನೇಮಕಾತಿ ಇಂದಿನಿಂದ ಅರ್ಜಿ ಹಾಕಿ, 270 ಹುದ್ದೆ

NABARD recruitment 2018 : Apply for 62 Development Asst Post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಆಗಸ್ಟ್ 2018ಕ್ಕೆ ಅನ್ವಯವಾಗುವಂತೆ. ವೇತನ ಶ್ರೇಣಿ 14650 ಪ್ರತಿ ತಿಂಗಳು.

ಎಸ್‌ಎಸ್‌ಎಲ್‌ಸಿ ಆದವರಿಗೆ ಕೊಂಕಣ ರೈಲ್ವೆಯಲ್ಲಿ ಕೆಲಸವಿದೆಎಸ್‌ಎಸ್‌ಎಲ್‌ಸಿ ಆದವರಿಗೆ ಕೊಂಕಣ ರೈಲ್ವೆಯಲ್ಲಿ ಕೆಲಸವಿದೆ

ಅರ್ಜಿಗಳನ್ನು ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧರಿಗೆ 50 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಇತರ ಅಭ್ಯರ್ಥಿಗಳಿಗೆ 450 ರೂ.ಗಳು.

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
National Bank for Agriculture and Rural Development (NABARD) recruitment 2018-19. Notification has been released on official website for the recruitment of 62 vacancies. The candidate who is looking for Development Assistant can apply online application before 13th September 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X