ನಬಾರ್ಡ್ ನಲ್ಲಿ 79 ಸಹಾಯಕ ಮ್ಯಾನೇಜರ್ ಹುದ್ದೆಗಳಿವೆ
ಬೆಂಗಳೂರು, ಮೇ 14: ನಬಾರ್ಡ್ ನಲ್ಲಿ 79 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಮೇ 26, 2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) 79 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಸಂಸ್ಥೆ : National Bank for Agriculture and Rural Development
ಹುದ್ದೆ ಹೆಸರು: ಅಸಿಸ್ಟಂಟ್ ಮ್ಯಾನೇಜರ್
ಒಟ್ಟು ಹುದ್ದೆ: 79
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29.06.2019

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ, ಬಿಟೆಕ್, ಬಿಬಿಎ ಯಾವುದೇ ವಿಷಯದಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು ಅಥವಾ ಶೇ 5ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಪಿಎಚ್‌ಡಿ ಅಥವಾ ಎರಡು ವರ್ಷದ ಪಿಜಿ ಡಿಪ್ಲೋಮಾವನ್ನು ಶೇ 50 ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/05/2018ಕ್ಕೆ ಅನ್ವಯವಾಗುವಂತೆ.
ಅರ್ಜಿ ಶುಲ್ಕ
ಎಸ್ ಸಿ/ ಎಸ್ಟಿ : 150 ರು
ಇತರೆ: 800 ರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26.05.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications