ನಬಾರ್ಡ್ ನೇಮಕಾತಿ 2019: 91 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಸೆ. 19: ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನಲ್ಲಿ ಡೆವಲಪ್ಮೆಂಟ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 02, 2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ನಬಾರ್ಡ್ ನ 91ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಸಂಸ್ಥೆ : National Bank for Agriculture and Rural Development

ಹುದ್ದೆ ಹೆಸರು: Development Assistant
ಒಟ್ಟು ಹುದ್ದೆ: 79
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02-10-2019.
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/09/2019ಕ್ಕೆ ಅನ್ವಯವಾಗುವಂತೆ.
ಅರ್ಜಿ ಶುಲ್ಕ:
ಎಸ್ ಸಿ/ಎಸ್ಟಿ / ಮಾಜಿಯೋಧ: 50 ರು
ಇತರೆ: 450 ರು
ನೇಮಕಾತಿ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14.09.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02.10.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications