Nainital ಬ್ಯಾಂಕ್ ನೇಮಕಾತಿ; 150 ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಜುಲೈ 22; Nainital ಬ್ಯಾಂಕ್ 150 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 31ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಮ್ಯಾನೇಜ್‌ಮೆಂಟ್ ಟ್ರೈನಿ 75, ಕ್ಲರ್ಕ್ 75 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ 17,300-30,000 ಮಾಸಿಕ ವೇತನ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗೆ ಕನಿಷ್ಠ ವಯೋಮತಿ 21 ವರ್ಷಗಳು. ಗರಿಷ್ಠ ವಯೋಮಿತಿ 27 ವರ್ಷಗಳು. ಕ್ಲರ್ಕ್ ಹುದ್ದೆಗೆ ಕನಿಷ್ಠ ವಯೋಮಿತಿ 21 ವರ್ಷ, ಗರಿಷ್ಠ 28 ವರ್ಷಗಳು.

Nainital bank Recruitment Apply For 150 Posts

ಅರ್ಜಿಗಳನ್ನು ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳು 1500 ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವ ಮೊದಲು ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ನಮೂದಿಸಿ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ nainitalbank.co.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+