ಕರ್ನಾಟಕದ ಎನ್ ಎಎಲ್ ನಲ್ಲಿ ವಿವಿಧ ಉದ್ಯೋಗಾವಕಾಶಗಳು
ಬೆಂಗಳೂರು,ಮಾರ್ಚ್. 07 : ಸರ್ಕಾರೇತರ ಸಂಸ್ಥೆ ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ತಾಂತ್ರಿಕ ಅಧಿಕಾರಿ ಮತ್ತು ಹಿರಿಯ ತಾಂತ್ರಿಕ ಅಧಿಕಾರಿ ಒಟ್ಟು 28 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಮಾರ್ಚ್ 25 ಕಡೆ ದಿನವಾಗಿದೆ.[ಅಬಕಾರಿ ಇಲಾಖೆಯಲ್ಲಿ 1180 ಹುದ್ದೆ, ಅರ್ಜಿ ಸಲ್ಲಿಕೆಗೆ ಮಾರ್ಚ್ 30 ಕೊನೆ ದಿನ]

ಹುದ್ದೆ ಸ್ಥಳ: ಕರ್ನಾಟಕ
ವಯೋಮಿತಿ: 35 ವರ್ಷ.
ವೇತನ: 9300 ರಿಂದ 34800 ರು. ಹಾಗೂ ತಿಂಗಳಿಗೆ 4600 ರು ಗ್ರೇಡ್ ಪೇ ನೀಡಲಾಗುತ್ತದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಏರೋನಾಟಿಕ್ ನಲ್ಲಿ ಬಿಇ ಅಥವಾ ಬಿಟೆಕ್ ಶೇ.55ರಷ್ಟು ಅಂಕದೊಂದಿಗೆ ಇಂಜಿನಿಯರಿಂಗ್ ಮುಗಿಸಿರಬೇಕು.
ಆಯ್ಕೆ ವಿಧಾನ: ಸಂದರ್ಶನ ಮತ್ತು ಅಭ್ಯರ್ಥಿಗಳ ನೈಪುಣ್ಯತೆ ಪರೀಕ್ಷೆ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನುಳಿದ ವರ್ಗದ ಅಭ್ಯರ್ಥಿಗಳಿಗೆ 100 ರು ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದ್ದು ಹಣವನ್ನು Director, CSIR-NAL and payable in Bengaluru ಈ ಹೆಸರಿಗೆ ತುಂಬಬೇಕು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications