NAL Recruitment 2023: ಬೆಂಗಳೂರಿನಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ವೇತನ, ಅರ್ಜಿ ಸಲ್ಲಿಕೆ ಬಗ್ಗೆ ತಿಳಿಯಿರಿ
ಬೆಂಗಳೂರು, ಅಕ್ಟೋಬರ್ 08: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL) ತನ್ನಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆರಂಭಿಸಿದ್ದು, ಈ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡುವ ಕಾರಣ ರಾಜಧಾನಿಯಲ್ಲಿ ಕೆಲಸ ಹುಡಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL) ಸಂಸ್ಥೆಯಲ್ಲಿ ಒಟ್ಟು 18 ಸೈಂಟಿಫಿಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 12ರಂದು ಸಂದರ್ಶನ ನಡೆಯಲಿರುವ ಅಭ್ಯರ್ಥಿಗಳು ಹಾಜರಾಗಬೇಕಿದೆ.

ನೇಮಕಾತಿ ಪೂರ್ಣ ವಿವರ
ಸಂಸ್ಥೆ ಹೆಸರು: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (ಎನ್‌ಎಎಲ್)
ಹುದ್ದೆ ಹೆಸರು: ಸೈಂಟಿಫಿಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್
ಖಾಲಿ ಹುದ್ದೆ ಸಂಖ್ಯೆ: 18
ಮಾಸಿಕ ವೇತನ: 18,000 ರೂಪಾಯಿ
ಪೋಸ್ಟಿಂಗ್: ಬೆಂಗಳೂರು
ಅರ್ಜಿ ಸಲ್ಲಿಕೆಯ ಕೊನೆ ದಿನ: ಅಕ್ಟೋಬರ್ 12
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು ಎಂದು ಯಾವುದೇ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ ಅಧಿಸೂಚನೆ ತಿಳಿಸಿದೆ.
ವಯಸ್ಸಿನ ಎಷ್ಟಿರಬೇಕು?
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ ಎಂದು ಏರೋಸ್ಪೇಸ್ ಲ್ಯಾಬೊರೇಟರೀಸ್ ಸಂಸ್ಥೆ ಮಾಹಿತಿ ನೀಡಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಅಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದೆ. ಈ ಸಂದರ್ಶನವು CSIR-NAL, RAB ಮೀಟಿಂಗ್ ಕಾಂಪ್ಲೆಕ್ಸ್, ಏರೋಸ್ಪೇಸ್ ಲ್ಯಾಬೋರೇಟರೀಸ್ [NAL], SBI ಸಮೀಪ, ಎನ್ಎಎಲ್ ಶಾಖೆ, ಕೋಡಿಹಳ್ಳಿ, ಬೆಂಗಳೂರು - 560017 ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 080-25086078 ಗೆ ಸಂಪರ್ಕಿಸಬೇಕು. ಇಲ್ಲವೇ [email protected] ಗೆ ಇಮೇಲ್ ಮಾಡುವಂತೆ ಎನ್‌ಎಎಲ್ ತಿಳಿಸಿದೆ.












Click it and Unblock the Notifications