NAL Jobs 2023: ಬೆಂಗಳೂರಿನಲ್ಲಿ ಎನ್‌ಎಎಲ್ ಹುದ್ದೆ ಖಾಲಿ ಇದೆ, ಅರ್ಜಿ ಹಾಕಿ
ಬೆಂಗಳೂರು, ಆಗಸ್ಟ್ 15: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL) ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಆಗಸ್ಟ್ 30ರವರೆಗೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL) ಸಂಸ್ಥೆಯಲ್ಲಿ ಒಟ್ಟು 2 ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳು ಖಾಲಿ ಇವೆ. ಆಸಕ್ತರು ಈ ಕೂಲಡೇ ಅರ್ಜಿಗಳನ್ನು ಆಫ್‌ಲೈನ್- ಅಂಚೆ ಕಚೇರಿ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವವರು ಮೊದಲು ಖಾಲಿ ಹುದ್ದೆಗಳ ಮಾಹಿತಿ, ಶೈಕ್ಷಣಿಕ ಅರ್ಹತೆ, ಮಾಸಿಕ ವೇತನ ಸೇರಿದಂತೆ ನೇಮಕಾತಿ ಕುರಿತು ಪೂರ್ಣ ಮಾಹಿತಿ ತಿಳಿಯಿರಿ.

ನೇಮಕಾತಿ ಪ್ರಕ್ರಿಯೆ ಪೂರ್ಣ ವಿವರ
ಸಂಸ್ಥೆ- NAL
ಹುದ್ದೆ ಹೆಸರು- ಜೂ. ರಿಸರ್ಚ್ ಫೆಲೋ
ಖಾಲಿ ಹುದ್ದೆ- 2
ಮಾಸಿಕ ವೇತನ- 31,000 ರೂಪಾಯಿ.
ವಿದ್ಯಾರ್ಹತೆ ಮಾಹಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಫಿಜಿಕಲ್/ ಮೆಟಿರಿಯಲ್ ಸೈನ್ಸ್‌ನಲ್ಲಿ ಎಂಎಸ್ಸಿ ಪೂರ್ಣಗೊಳಿಸಿರಬೇಕು ಎಂದು ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ ಅಧಿಸೂಚನೆ ಹೇಳಿದೆ.

ವಯೋಮಿತಿ ಹಾಗೂ ಸಡಿಲಿಕೆ ವಿವರ
ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಇದೇ ವರ್ಷ ಆಗಸ್ಟ್ 30ಕ್ಕೆ ಗರಿಷ್ಠ ವಯಸ್ಸು 28 ವರ್ಷ ಮೀರಿರಬಾರದು. ಇನ್ನೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಮೂರು ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುವುದು. ಅಲ್ಲಿ ಉತ್ತೀರ್ಣ ಆಗುವವರಿಗೆ ನಂತರ ನೇರವಾಗಿ ಸಂದರ್ಶನ ಇರಲಿದೆ ಎಂದು ಅಧಿಸೂಚನೆ ತಿಳಿಸಿದೆ. ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುವುದು.
ಅರ್ಜಿ ಸಲ್ಲಿಕೆ ವಿಳಾಸ
ಅಭ್ಯರ್ತಿಗಳು ಭರ್ತಿ ಮಾಡಿ ಅರ್ಜಿ ನಮೂನೆಯನ್ನು ಸೂಕ್ತ ದಾಖಲೆಗಳ ಸಮೇತ 'ಆಡಳಿತದ ನಿಯಂತ್ರಕರು, ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳು, ಪಿ.ಬಿ.ನಂ.1779, HAL ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ, ಬೆಂಗಳೂರು-560017 ಇಲ್ಲಿಗೆ ನಿಗದಿತ ದಿನಾಂಕ ಆಗಸ್ಟ್ 30 ರೊಳಗೆ ಕಳುಹಿಸುವಂತೆ ಕೋರಲಾಗಿದೆ.












Click it and Unblock the Notifications