Namma metro: ನಮ್ಮ ಮೆಟ್ರೋದಲ್ಲಿ 82,660 ರೂಪಾಯಿ ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ, ವಿವರ ಇಲ್ಲಿದೆ
ಬೆಂಗಳೂರು, ಆಗಸ್ಟ್, 22: ಬೆಂಗಳೂರಿನಲ್ಲಿ ಮೆಟ್ರೋದಲ್ಲಿ ದಿನಕಳೆದಂತೆ ವಿಸ್ತರಣೆ ಹೆಚ್ಚಾಗುವ ಮೂಲಕ ಉದ್ಯೋಗವಾಕಾಶಗಳು ಕೂಡ ತೆರೆದುಕೊಳ್ಳುತ್ತಿವೆ. ಹಾಗೆಯೇ ಇದೀಗ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರ ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ, ಸಂಬಳದ ವಿವರವನ್ನು ಇಲ್ಲಿ ತಿಳಿಯರಿ.
ಖಾಲಿ ಇರುವ ಹುದ್ದೆಗಳ ವಿವರ
ನಮ್ಮ ಮೆಟ್ರೋದಲ್ಲಿ ಒಟ್ಟು 96 ಸ್ಟೇಷನ್ ಕಂಟ್ರೋಲರ್ ಅಥವಾ ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಇವುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿಎಂಆರ್‌ಸಿಎಲ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದೆ.

ಆಯ್ಕೆಯಾಗುವ ಅಭ್ಯರ್ಥಿಗಳ ವೇತನದ ವಿವರ
ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 35,000-82,660 ರೂಪಾಯಿವರೆಗೂ ಸಂಬಳ ನೀಡಲಾಗುತ್ತದೆ. ಅಲ್ಲದೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ಇನ್ನು ಅರ್ಜಿ ಹಾಕಲು ಇಂದೇ ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.












Click it and Unblock the Notifications