Namma metro: ನಮ್ಮ ಮೆಟ್ರೋದಲ್ಲಿ ₹1,40,000 ವೇತನದ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿದೆ ವಿವರ

ಬೆಂಗಳೂರು, ಅಕ್ಟೋಬರ್‌, 02: ಮಹಾನಗರ ಬೆಂಗಳೂರು ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಬೆಳವಣಿಗೆಯಾಗುತ್ತಲೇ ಇದೆ. ಹಾಗೂ ಇಲ್ಲಿ ಆಗಾಗ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಸಹ ಆಹ್ವಾನಿಸಲಾಗುತ್ತದೆ. ಹಾಗೆಯೇ ಇದೀಗ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 1,40,000 ರೂಪಾಯಿ ಸಂಬಳದಿಂದ ಆರಂಭವಾಗುವ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸಲು ಏನೆಲ್ಲ ಅರ್ಹತೆಗಳೇನು ಇರಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ (BMRCL)​ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​​​ಲೈನ್ ​ಮತ್ತು ಆಫ್​ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

namma-metro-job-vacancies

ಅರ್ಜಿ ಸಲ್ಲಿಸಲು ಇದೇ ಅಕ್ಟೋಬರ್ 25 ಕೊನೆಯ ದಿನಾಂಕವಾಗಿದ್ದು, ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.inಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆ ಖಾಲಿ ಇದ್ದು, ಒಟ್ಟು 8 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಿಇ/ಬಿ.ಟೆಕ್, ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ. ಆಯ್ಕೆಯಾದವರಿಗೆ ವೇತನ ಮಾಸಿಕ 1,40,000-1,65,000 ರೂಪಾಯಿವರೆಗೆ ಇರಲಿದೆ ಎಂದು ನ್ಯೂಸ್‌ 18 ಕನ್ನಡ ವರದಿ ಮಾಡಿದೆ.

ವಿಭಾಗವಾರು ಹುದ್ದೆಗಳ ವಿವರ

1. ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- 1

2. ಅಡಿಶನಲ್ ಚೀಫ್​ ಎಂಜಿನಿಯರ್ (ಟ್ರಾಕ್ಷನ್ & RSS)-2

3. ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್​ ​) - 1

4. ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ) - 1

5. ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS) - 1

6. ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್) - 1

7. ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್) - 1

ಹೀಗೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ವಿಭಾಗವಾರು 8 ಖಾಲಿ ಹುದ್ದೆಗಳಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+