ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ನರೇಂದ್ರ ಮೋದಿಯಿಂದ 71,000 ಜನರಿಗೆ ನೇಮಕಾತಿ ಪತ್ರ ವಿತರಣೆ

|
Google Oneindia Kannada News

ನವದೆಹಲಿ, ನವೆಂಬರ್‌, 22: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೋಜ್‌ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ಸೇರ್ಪಡೆಯಾದ 71,000 ನೌಕರರಿಗೆ ಮಂಗಳವಾರ (ನವೆಂಬರ್‌, 22) ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಅಲ್ಲದೇ ಇದೇ ವೇಳೆ ವಿಡಿಯೋ ಕಾನ್ಫರೆನ್ಸ್‌​​​​ ಮೂಲಕ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿಯಿಂದ ಮಾಹಿತಿ ಲಭ್ಯವಾಗಿದೆ.

ರೋಜ್‌ಗಾರ್ ಮೇಳವು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಉಪಕ್ರಮದ ಒಂದು ಹಂತವಾಗಿದೆ. ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರವಾಗಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ ಅಕ್ಟೋಬರ್​ನಲ್ಲಿ ರೋಜ್‌ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡ 75,000 ನೌಕರರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗಿತ್ತು. ಇದೀಗ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಹೊರತುಪಡಿಸಿ ದೇಶದ 45 ಸ್ಥಳಗಳಲ್ಲಿ ಹೊಸದಾಗಿ ಸೇರ್ಪಡೆ ಆದವರಿಗೆ ನೇಮಕಾತಿ ಪತ್ರಗಳ ಭೌತಿಕ ಪ್ರತಿಗಳನ್ನು ಹಸ್ತಾಂತರಿಸಲಾಗುವುದು ಎನ್ನುವ ಮಾಹಿತಿ ಹೊರಬಿದ್ದಿದೆ.

 ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ: ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ: ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

ವಿವಿಧ ಕ್ಷೇತ್ರಗಳ ನೌಕರರಿಗೆ ನೇಮಕಾತಿ ಪತ್ರ

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ಮಯೋಗಿ ಪ್ರಾರಂಭ್ ಮಾಡ್ಯೂಲ್ ಅ​ನ್ನು ಪ್ರಾರಂಭಿಸಲಿದ್ದು, ಇದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳಿಗಾಗಿ ಆನ್‌ಲೈನ್ ಓರಿಯಂಟೇಶನ್ ಕೋರ್ಸ್ ಆಗಿದೆ.

Narendra Modi will be Distribute Appointment Letters to 71,000

ಹೊಸದಾಗಿ ನೇಮಕಗೊಂಡವರು ಭಾರತ ಸರ್ಕಾರದ 38 ವಿವಿಧ ಇಲಾಖೆಗಳಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಸಚಿವಾಲಯಗಳು ಸ್ವತಃ ಅಥವಾ ಯೂನಿಯನ್ ಪಬ್ಲಿಕ್ ಸರ್ವಿಸಸ್ ಕಮಿಷನ್, ಸ್ಟಾಫ್ ಸೆಲೆಕ್ಷನ್ ಕಮಿಷನ್ ಮತ್ತು ರೈಲ್ವೆ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಿಷನ್ ಮೋಡ್‌ನಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಶಿಕ್ಷಕರು, ಉಪನ್ಯಾಸಕರು, ನರ್ಸ್‌ಗಳು, ನರ್ಸಿಂಗ್‌ ಅಧಿಕಾರಿಗಳು, ವೈದ್ಯರು, ಫಾರ್ಮಾಸಿಸ್ಟ್‌, ರೇಡಿಯೊಗ್ರಾಫರ್ಸ್‌ ಸೇರಿದಂತೆ ಇತರೆ ತಾಂತ್ರಿಕ ಹಾಗೂ ಪ್ಯಾರಾಮೆಡಿಕಲ್‌ ನೌಕರರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ.

English summary
Prime Minister Narendra Modi will distribute appointment letters to 71,000 new employees today, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X