NCBS Recruitment 2023: ಬೆಂಗಳೂರಿನಲ್ಲೇ 96,720 ರೂ. ಉದ್ಯೋಗ, ವಿವರ ತಿಳಿಯಿರಿ
ಬೆಂಗಳೂರು, ಆಗಸ್ಟ್ 16: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS) ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಡುವ ಪ್ರಕ್ರಿಯೆ ಆರಂಭಿಸಿದ್ದು, ಅದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಆದ್ದರಿಂದ ಆಸಕ್ತರು ಕೂಡಲೇ ಆಗಸ್ಟ್ 25ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS) ದಲ್ಲಿ ಒಂದು ಅಸೋಸಿಯೇಟ್ ಡೈರೆಕ್ಟರ್ ಹುದ್ದೆ ಖಾಲಿ ಇದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಪ್ರಕ್ರಿಯೆ ಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.

ನೇಮಕಾತಿ ಪೂರ್ಣ ಮಾಹಿತಿ
ಹುದ್ದೆ- ಅಸೋಸಿಯೇಟ್ ಡೈರೆಕ್ಟರ್
ಖಾಲಿ ಹುದ್ದೆ ಸಂಖ್ಯೆ - 01
ಉದ್ಯೋಗದ ಸ್ಥಳ - ಬೆಂಗಳೂರು
ಮಾಸಿಕ ವೇತನ - 96,720 ರೂಪಾಯಿ.
ಶೈಕ್ಷಣಿಕ ಅರ್ಹತೆ ವಿವರ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ, ಪಿಎಚ್‌ಡಿ ಪೂರ್ಣಗೊಳಿಸಿರುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯಸ್ಸಿನ ಮಿತಿ-ಅರ್ಜಿ ಶುಲ್ಕ
ಹುದ್ದೆ ಪಡೆಯಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳ ವಯಸ್ಸು 2023 ಜುಲೈ 1ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಇನ್ನೂ ಮೀಸಲಾತಿ ಅನ್ವಯ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇರಲಿದೆ. ಈ ಹುದ್ದೆಗೆ ಅರ್ಜಿಯನ್ನು ಯಾವುದೇ ಶುಲ್ಕವಿಲ್ಲದೇ ಸಲ್ಲಿಸಬಹುದಾಗಿದೆ. ಯಾವ ವರ್ಗದವರಿಗೂ ಸಹ ಶುಲ್ಕ ನಿಗದಿ ಮಾಡಿಲ್ಲ.
ವೇತನ ಮತ್ತು ಆಯ್ಕೆ ಹೇಗೆ
ನೇಮಕಾತಿಯಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 96,720 ರೂಪಾಯಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದವರಿಗೆ ಬೆಂಗಳೂರುನಲ್ಲಿ ಪೋಸ್ಟಿಂಗ್ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಆಗಸ್ಟ್ 25ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಲ್ಲಿನ ವೆಬ್‌ಸೈಟ್‌ಗೆ https://www.ncbs.res.in/jobportal/node/add/application/80177 ಬೇಟಿ ನೀಡಬಹುದಾಗಿದೆ.












Click it and Unblock the Notifications