NCBS Jobs: ಬೆಂಗಳೂರಲ್ಲೇ ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ಉದ್ಯೋಗ, ವಿವರ ನೋಡಿ
ಬೆಂಗಳೂರು, ಏಪ್ರಿಲ್ 11: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರವು (NCBS) ತನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ಮಾಡಲಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಆಸಕ್ತರಿಗೆ ಅರ್ಜಿ ಸಲ್ಲಿಕೆಗೆ ಏಪ್ರಿಲ್ 30ರವರೆಗೆ ಅವಕಾಶ ಇದೆ ಎಂದು ಎನ್‌ಸಿಬಿಎಸ್ ತಿಳಿಸಿದೆ.
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರವು (NCBS) ತನ್ನಲ್ಲಿರುವ ಒಂದು ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್-ಬಿ ಹುದ್ದೆಗೆ ಅರ್ಹರನ್ನು ನೇಮಿಸಲು ಮುಂದಾಗಿದೆ. ಆಯ್ಕೆ ಆಗುವ ಅಭ್ಯರ್ಥಿಗೆ ಕೈತುಂಬ ವೇತನ ಸಹಿತ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಲಿದೆ.

ಆಸಕ್ತರು ಕೊನೆಯ ದಿನಾಂಕದವರೆಗೆ ಕಾಯದೇ ಇಂದೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇದಕ್ಕು ಮೊದಲು ವಯೋಮಿತಿ, ವೇತನ, ಶೈಕ್ಷಣಿಕ ಅರ್ಹತೆ ಸೇರಿದಂತೆ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.
ವಿದ್ಯಾರ್ಹತೆ ವಿವರ
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು ಎಂದು ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯಸ್ಸಿನ ಮಿತಿ
ಅರ್ಹ ಅಭ್ಯರ್ಥಿಗಳ ವಯಸ್ಸು ಗರಿಷ್ಠ 33 ವರ್ಷ ಮೀರಿರಬಾರದು ಎಂದು ನಿರ್ಬಂಧ ವಿಧಿಸಿದೆ. ಅಲ್ಲದೇ ಜಾತಿ ಮೀಸಲಾತಿ ಅನುಗುಣವಾಗಿ ಆಯಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ಸಂಸ್ಥೆ ಹೇಳಿದೆ.

ಆಯ್ಕೆ ಹೇಗೆ ನಡೆಯುತ್ತೆ?
ಸಂಸ್ಥೆಯು ಮೊದಲಿಗೆ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುತ್ತದೆ. ನಂತರ ಸ್ಕಿಲ್ ಟೆಸ್ಟ್ ನಡೆಸಿ ಅದರಲ್ಲಿ ಉತ್ತೀರ್ಣ ಆಗುವವರನ್ನು ಆಯ್ಕೆ ಮಾಡುತ್ತದೆ. ಅಭ್ಯರ್ಥಿಗೆ ಮಾಸಿಕ ₹35,400 ವೇತನ ಕೊಟ್ಟಿ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು.
ಆನ್‌ಲೈನ್-ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ
ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್ ಲಿಂಕ್ ಮೂಲಕ (https://www.ncbs.res.in/jobportal/) ಮತ್ತು ಆಫ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
ಮುಖ್ಯಸ್ಥರು, (A&F), ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್, GKVK ಪೋಸ್ಟ್, ಬಳ್ಳಾರಿ ರಸ್ತೆ, ಬೆಂಗಳೂರು: 560065 ಇಲ್ಲಿಗೆ ತೆರಳಿ ದಾಖಲಾತಿಗಳ ಸಮೇತ ಅರ್ಜಿ ಸಲ್ಲಿಬೇಕು ಎಂದು ತಿಳಿಸಿದರು.
ನೆನಪಿಡಬೇಕಾದ ದಿನಗಳು
* ಅರ್ಜಿ ಸಲ್ಲಿಕೆ ಆರಂಭ ದಿನ: ಏಪ್ರಿಲ್ - 05
* ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಕಡೆಯ ದಿನಾಂಕ: ಏಪ್ರಿಲ್ 30












Click it and Unblock the Notifications