Get Updates
Get notified of breaking news, exclusive insights, and must-see stories!

ಎನ್‌ಡಿಆರ್‌ಎಫ್ ನೇಮಕಾತಿ; 1978 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಆಗಸ್ಟ್ 31; ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) 1978 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 18, 2021 ಕೊನೆಯ ದಿನವಾಗಿದೆ.

ಅಸಿಸ್ಟೆಂಟ್ ಕಮಾಂಡೆಂಟ್ 35, ಇನ್ಸ್‌ಪೆಕ್ಟರ್ 30, ಸಬ್ ಇನ್ಸ್‌ಪೆಕ್ಟರ್ 656, ಹೆಡ್ ಕಾನ್ಸ್‌ಟೇಬಲ್ 1181 ಮತ್ತು ಕಾನ್ಸ್‌ಟೇಬಲ್ 76 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗೆ 56100-177500 ರೂ., ಇನ್ಸ್‌ಪೆಕ್ಟರ್ ಹುದ್ದೆಗೆ 44900-142400, ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ 35400-112400, ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ 25500-81100 ಮತ್ತು ಕಾನ್ಸ್‌ಟೇಬಲ್ ಹುದ್ದೆಗೆ 21700-69100 ರೂ. ವೇತನವನ್ನು ನಿಗದಿ ಮಾಡಲಾಗಿದೆ.

NDRF Recruitment Apply For 1978 Posts

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷಗಳು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. ndrf.gov.in

ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಭ್ಯರ್ಥಿಗಳು 18 ಅಕ್ಟೋಬರ್ 2021ರೊಳಗೆ ಸಲ್ಲಿಕೆ ಮಾಡಬಹುದು. ಅರ್ಜಿ ಡೌನ್‌ಲೋಡ್ ಮಾಡುವಾಗ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ನೀಡಬೇಕು ಎಂದು ಸೂಚಿಸಲಾಗಿದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಕೆ ಮಾಡಲು ವಿಳಾಸ; DIG (Estt), HQ NDRF, 6th Floor, NDCC-II Building, Jai Singh Road, New Delhi - 110001.

ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಅಭ್ಯರ್ಥಿಗಳು ಅರ್ಜಿಗಳು ಅಕ್ಟೋಬರ್ 18ರೊಳಗೆ ತಲುಪುವಂತೆ ಸಲ್ಲಿಕೆ ಮಾಡಬೇಕು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+