ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ನೇಮಕಾತಿಗೆ ಇದ್ದ ತಡೆ ತೆರವು
ಬೆಂಗಳೂರು, ಸೆಪ್ಟೆಂಬರ್ 23; ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ವಿವಿಧ ಇಲಾಖೆಗಳ ನೇಮಕಾತಿಗೆ ಕೋವಿಡ್ ಸಂದರ್ಭದಲ್ಲಿ ಹಾಕಿದ್ದ ತಡೆಯನ್ನು ತೆರವುಗೊಳಿಸಲಾಗಿದೆ.
ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ಕೆ. ಟಿ. ಶ್ರೀಕಂಠೇಗೌಡ ಕೇಳಿದ್ದ ಪ್ರಶ್ನೆಗೆ ಕಂದಾಯ ಸಚಿವ ಆರ್. ಅಶೋಕ ಈ ಕುರಿತು ಉತ್ತರ ನೀಡಿದ್ದಾರೆ. "ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ವಿಧಿಸಿದ್ದ ತಡೆಯನ್ನು ಆರ್ಥಿಕ ಇಲಾಖೆ ಇತ್ತೀಚೆಗೆ ತೆರವುಗೊಳಿಸಿದೆ" ಎಂದು ಹೇಳಿದರು.
"ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ವಿವಿಧ ಹಂತದಲ್ಲಿ ಭರ್ತಿ ಮಾಡಲಾಗುತ್ತಿದೆ. ಹೊಸದಾಗಿ 2072 ಭೂ ಮಾಪಕರ ನೇಮಕಾತಿಗೆ ಪರೀಕ್ಷೆ ನಡೆಸಲಾಗಿತ್ತು. 820 ಮಂದಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇನ್ನಷ್ಟು ಮಂದಿಯನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ" ಎಂದು ಸಚಿವರು ಉತ್ತರ ನೀಡಿದರು.

"ಕೋವಿಡ್ ಕಾರಣದಿಂದಾಗಿ ನೇಮಕಾತಿಗಳಿಗೆ ತಡೆ ನೀಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿ ಇರುವುದರಿಂದ ಎಲ್ಲಾ ಹಂತದಲ್ಲಿಯೂ ಕಚೇರಿಗಳ ನಿರ್ವಹಣೆಗೆ ಸಮಸ್ಯೆ ಆಗಿದೆ. ಈಗ ನೇಮಕಾತಿ ಮಾಡುವ ಮೂಲಕ ಸಮಸ್ಯೆ ಪರಿಹಾರ ಮಾಡಲಾಗುತ್ತದೆ" ಎಂದು ಆರ್. ಅಶೋಕ ತಿಳಿಸಿದರು.
ಖಾಲಿ ಹುದ್ದೆಗಳ ವಿವರ; ಕಂದಾಯ ಇಲಾಖೆಯಲ್ಲಿ ತಹಶೀಲ್ದಾರ್, ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ 5689, ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ 1005, ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ 643, ಗ್ರೇಡ್-1, ಗ್ರೇಡ್-2 ತಹಶೀಲ್ದಾರ 262, ಶಿರಸ್ತೇದಾರ್ ವೃಂದ 160 ಮತ್ತು1792 ಗ್ರಾಮ ಲೆಕ್ಕಿಗ ಹುದ್ದೆಗಳು ಖಾಲಿ ಇವೆ.
ಕೋವಿಡ್ ಸಂದರ್ಭದಲ್ಲಿ ತಡೆ; ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ಆರ್ಥಿಕ ಇಲಾಖೆ ವಿವಿಧ ಇಲಾಖೆಗಳ ನೇಮಕಾತಿಗೆ ತಡೆ ನೀಡಿತ್ತು. ಅತಿ ಅಗತ್ಯವಿರುವ ಹುದ್ದೆಗಳನ್ನು ಬಿಟ್ಟು ಉಳಿದ ಹುದ್ದೆಗಳ ನೇಮಕಾತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸುತ್ತೋಲೆ ಹೊರಡಿಸಿತ್ತು.
ಆರ್ಥಿಕ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಎನ್. ಎಸ್. ಪ್ರಸಾದ್ 2020ರ ಜುಲೈನಲ್ಲಿ ಈ ಕುರಿತು ಸುತ್ತೋಲೆ ಹೊರಡಿಸಿದ್ದರು. ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್‌ಲಾಗ್ ಹುದ್ದೆಗಳು ಸೇರಿದಂತೆ ಎಲ್ಲಾ ನೇರ ನೇಮಕಾತಿ ಭರ್ತಿ ಪ್ರಕ್ರಿಯೆಯನ್ನು ಮುಂದಿನ ಆದೇಶದ ತನಕ ತಡೆ ಹಿಡಿಯಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.
ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುವುದು ಮತ್ತು ಕೋವಿಡ್ ಸಂದರ್ಭದಲ್ಲಿ ಆದ ಆರ್ಥಿಕ ನಷ್ಟದ ಕಾರಣದಿಂದಾಗಿ ಆರ್ಥಿಕ ಇಲಾಖೆ ನೇಮಕಾತಿಗೆ ತಡೆ ನೀಡಿತ್ತು. ಆದರೆ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ಇದ್ದವರಿಗೆ ಇದರಿಂದ ಹಿನ್ನಡೆ ಆಗಿತ್ತು. ವಯಸ್ಸು ಜಾಸ್ತಿಯಾಗಿ ಸರ್ಕಾರಿ ಉದ್ಯೋಗ ಕೈ ತಪ್ಪುವ ಭೀತಿ ಎದುರಾಗಿತ್ತು.
ಕೋವಿಡ್ ಕಾರಣದಿಂದಾಗಿ ಸಂಪನ್ಮೂಲ ಕ್ರೋಢೀಕರಣ ಮಾಡುವುದು ಅಗತ್ಯವಾಗಿದ್ದು, ಸರ್ಕಾರದ ವೆಚ್ಚದಲ್ಲಿ ಮಿತವ್ಯಯ ಪಾಲಿಸುವುದು ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಎಲ್ಲಾ ನೇರ ನೇಮಕಾತಿಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು.
ಈಗಾಗಳೇ ವಿವಿಧ ಇಲಾಖೆಗಳು ಆರ್ಥಿಕ ಇಲಾಖೆ ಅನುಮತಿ ಪಡೆದು ನೇಮಕಾತಿಯ ವಿವಿಧ ಹಂತಗಳಲ್ಲಿರುವ ಹುದ್ದೆಗಳಿಗೂ ಸಹ ತಡೆ ನೀಡಲಾಗಿತ್ತು. ಇದರಿಂದಾಗಿ ನೇಮಕಾತಿಗಾಗಿ ಪರೀಕ್ಷೆ ಬರೆದವರ ಫಲಿತಾಂಶ ಸಹ ಪ್ರಕಟವಾಗಿರಲಿಲ್ಲ.
ಪ್ರಸ್ತುತ ವಿವಿಧ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇ 40ಕ್ಕಿಂತ ಅಧಿಕ ಹುದ್ದೆಗಳು ಖಾಲಿ ಇವೆ. ಸರ್ಕಾರ ನೇಮಕಾತಿಗೆ ತಡೆ ನೀಡಿದ್ದರಿಂದ ಸಿಬ್ಬಂದಿಗಳು ಇಲ್ಲದೇ ಸರ್ಕಾರಿ ಕೆಲಸವೂ ವಿಳಂಬವಾಗುತ್ತಿತ್ತು. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೂ ನಿರಾಸೆಯಾಗಿತ್ತು.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications