ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಎಫ್‌ಎಲ್
ಬೆಂಗಳೂರು, ಆಗಸ್ಟ್ 13 : ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ 41 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 5/9/2019 ಕೊನೆಯ ದಿನವಾಗಿದೆ.
ಎನ್‌ಎಫ್‌ಎಲ್ ಲೋಕೋ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ, ಮೆಟ್ರಿಕ್, ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. 31 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. (31 ಜುಲೈ 2019ಕ್ಕೆ).
ಆನ್‌ಲೈನ್ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಸಲ್ಲಿಸಲು 5/9/2019 ಕೊನೆಯ ದಿನ.
ಅರ್ಜಿ ಶುಲ್ಕ : ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗ/ಒಬಿಸಿ/ಇಡ್ಲ್ಯುಎಸ್ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ಅಂಗವಿಕಲ/ಇಲಾಖಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications