NHAI Jobs 2024: ಭಾರತೀಯ ರಾಷ್ಟ್ರೀಯ ಹೆದ್ಧಾರಿ ಪ್ರಾಧಿಕಾರದಿಂದ ಮಾಸಿಕ ₹2,08,700 ಹುದ್ದೆಗೆ ಅರ್ಜಿ ಆಹ್ವಾನ
NHAI Jobs 2024: ಭಾರತೀಯ ರಾಷ್ಟ್ರೀಯ ಹೆದ್ಧಾರಿ ಪ್ರಾಧಿಕಾರ ಆಗಾಗ ಹೆದ್ದರಿ ಕಾಮಗಾರಿಗೆ ಸಂಬಂಧಿಸಿದಂತಹ ಮಹತ್ವದ ಅಪ್ಡೇಟ್‌ಗಳನ್ನು ನೀಡುತ್ತಿರುತ್ತದೆ. ಇದೀಗ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳಿರಬೇಕು ಹಾಗೂ ಮಾಸಿಕ ವೇತನ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈ ಹುದ್ದೆಗೆ ಡೆಪ್ಯುಟೇಶನ್ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅಲ್ಲದೇ ಕೆಲಸದಲ್ಲಿ ಸಾಕಷ್ಟು ಅನುಭವ ಇರುವಂತವರು ಇವುಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಉದ್ಯೋಗಗಳಿಗೆ 3 ವರ್ಷಗಳ ಅವಧಿಗೆ ಆಕಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಣೆ ಮಾಡಲೂಬಹುದು ಎಂದು ತಿಳಿಸಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಜನವರಿ 6, 2025ರ ಸಂಜೆ 6 ಗಂಟೆ ಒಳಗೆ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಇನ್ನು ಈ ಹುದ್ದೆಗೆ ಸಂಬಂಧಿಸಿದ ಇತರೆ ಮಾಹಿತಿ ಪರಿಶೀಲನೆ ಮಾಡಬೇಕೆಂದರೆ ಇಲಾಖೆಯ ಪಿಡಿಎಫ್ ಅನ್ನು ಪರಿಶೀಲನೆ ಮಾಡಬೇಕಾಗುತ್ತದೆ.
ಮಾಸಿಕ ವೇತನ ಎಷ್ಟು?: ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ವೇತನ 67,700-2,08,700 ರೂಪಾಯಿ ಇರುತ್ತದೆ. ಉದ್ಯೋಗದ ಹೆಸರು ಮ್ಯಾನೇಜರ್ (ಫೈನಾನ್ಸ್ ಮತ್ತು ಅಕೌಂಟ್ಸ್) ಆಗಿದ್ದು, ಒಟ್ಟು 17 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 56 ವರ್ಷ ಮೀರಿರಬಾರದು ಎಂದು ತಿಳಿಸಿದೆ.
ಅರ್ಜಿ ಸಲ್ಲಿಕೆಗೆ ಅರ್ಹತೆಗಳೇನು?: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವವರು ವಾಣಿಜ್ಯ ಪದವಿ (ಬಿಕಾಂ) ಅಥವಾ ಚಾರ್ಟರ್ಡ್ ಅಕೌಂಟೆಂಟ್ ಅಥವಾ ಸರ್ಟಿಫೈಡ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್ ಅಥವಾ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ 4 ವರ್ಷಗಳ ಅನುಭವ ಇರಬೇಕಾಗುತ್ತದೆ ಎಂದು ತಿಳಿಸಿದೆ.
ಅರ್ಜಿ ಸಲ್ಲಿಕೆಯೆ ಕೊನೆಯ ದಿನಾಂಕ 06 ಜನವರಿ 2025 ಆಗಿದ್ದು, ಅಂದೇ ಸಂಜೆ 6 ಗಂಟೆ ಒಳಗೆ ಅರ್ಜಿ ಪ್ರಿಂಟ್ ತೆಗೆದುಕೊಳ್ಳಬೇಕಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದೆ.












Click it and Unblock the Notifications