73 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಎಚ್‌ಎಐ
ಬೆಂಗಳೂರು, ಏಪ್ರಿಲ್ 10 : ಎನ್‌ಎಚ್‌ಎಐ 73 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 27/5/2019 ಕೊನೆಯ ದಿನವಾಗಿದೆ.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರ (ಎನ್‌ಎಚ್‌ಎಐ) ಮ್ಯಾನೇಜರ್ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿ ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಐಸಿಎಐ, ಐಸಿಡಬ್ಯುಎಐ, ಎಂಬಿಎ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಅರ್ಜಿ ಸಲ್ಲಿಸುವವರಿಗೆ 56 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಆನ್‌ಲೈನ್ ಮೂಲಕ ಮಾತ್ರ 27/5/2019ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಪ್ರಮುಖ ಅಂಶಗಳು
* ಎನ್‌ಎಚ್‌ಎಐ ನೇಮಕಾತಿ
* ಒಟ್ಟು ಹುದ್ದೆಗಳು 73
* ದೇಶದ ಯಾವುದೇ ನಗರದಲ್ಲಿ ಕೆಲಸ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications