NHAI Recruitment 2023: ಕೇಂದ್ರ ಸರ್ಕಾರಿ ಉದ್ಯೋಗ, ಕೈತುಂಬ ಸಂಬಳ, ಅರ್ಜಿ ಸಲ್ಲಿಕೆಗೆ ಸೆ.4 ಕೊನೆ ದಿನ

ಬೆಂಗಳೂರು, ಸೆಪ್ಟಂಬರ್ 03: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಕೇಂದ್ರ ಸರ್ಕಾರದ ಉದ್ಯೋಗ ಬಯಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಒಟ್ಟು ಒಂದು ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆ ಖಾಲಿ ಇದೆ. ಆಸಕ್ತರು ಅಭ್ಯರ್ಥಿಗಳು ನಾಳೆ ಸೆಪ್ಟೆಂಬರ್ 4 ರೊಳಗೆ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಆಸಕ್ತರು ನೇಮಕಾತಿ ಪೂರ್ಣವಿವರವನ್ನು ಇಲ್ಲಿ ತಿಳಿದುಕೊಳ್ಳಬಹುದು.

NHAI Recruitment 2023: NHAI Invite Applications For Deputy General Manager Post

ನೇಮಕಾತಿ ಪೂರ್ಣ ವಿವರ

ಸಂಸ್ಥೆ ಹೆಸರು : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)

ಹುದ್ದೆ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್

ಎಷ್ಟು ಹುದ್ದೆ : ಒಂದು

ಮಾಸಿಕ ವೇತನ : ರೂ.78,800 ಯಿಂದ 2,09,200 ರೂ.

ಉದ್ಯೋಗದ ಸ್ಥಳ: ಭಾರತ

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪದವಿ, ಪತ್ರಿಕೋದ್ಯಮ ಹಾಗೂ ಸಮೂಹ ಮಾಧ್ಯಮಗಳು/ ಪಬ್ಲಿಕ್ ರಿಲೇಶನ್ಸ್​​ನಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಸೂಚನೆ ತಿಳಿಸಿದೆ.

ವಯಸ್ಸಿನ ಮಿತಿ

ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ವಯಸ್ಸು ಇದೇ ಸೆಪ್ಟೆಂಬರ್ 4ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ ಎಂದು ಪ್ರಾಧಿಕಾರ ತಿಳಿಸಿದೆ.

NHAI Recruitment 2023: NHAI Invite Applications For Deputy General Manager Post

ವೇತನ ಮತ್ತು ಆಯ್ಕೆ

ಆಯ್ಕೆ ಆಗುವ ಅಭ್ಯರ್ಥಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಿದ್ದಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ಇರಲಿದೆ. ನಂತರ ನೇರವಾಗಿ ಸಂದರ್ಶನ ಇರಲಿದೆ. ಆಯ್ಕೆ ಆಗುವವರಿಗೆ ಮಾಸಿಕ ವೇತನ ರೂ.78,800 ಯಿಂದ 2,09,200 ರೂಪಾಯಿ ಸಿಗಲಿದೆ.

ಅಭ್ಯರ್ಥಿಗಳು ಅಗತ್ಯ ದಾಖಲಾತಿ ಸಹಿತ ಅರ್ಜಿಯನ್ನು ಕೂಡಲೇ ಭರ್ತಿ ಮಾಡಿ '' ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ' ಪ್ಲಾಟ್ ನಂ.G5-&6, ಸೆಕ್ಟರ್-10, ದ್ವಾರಕಾ, ನವದೆಹಲಿ-110075'' ಇಲ್ಲಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 4 ಕೊನೆಯ ದಿನವಾಗಿದೆ, ಆನ್​ಲೈನ್ ಅಪ್ಲಿಕೇಶನ್​ನ್ನು ಪ್ರಿಂಟ್​​ಔಟ್ ತೆಗೆದುಕೊಳ್ಳಲು ಕೊನೆಯ ದಿನ ಸೆಪ್ಟೆಂಬರ್ 11 ಎಂದು ಅಧಿಸೂಚನೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+