NHAI Recruitment 2026: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ
NHAI Recruitment 2026: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದ್ರೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಹಾಗೂ ಕೊನೇ ದಿನಾಂಕ ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದ ಅಡಿಯಲ್ಲಿ ಉದ್ಯೋಗ ಹುಡುಕಾಟದಲ್ಲಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅರ್ಜಿ ಸಲ್ಲಿಕೆಗೆ ಫೆಬ್ರವರಿ 9ರ ವರೆಗೂ ಅವಕಾಶ ಇದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ ಹಾಗೂ ವಯೋಮಿತಿ ವಿವರ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕಾಗುತ್ತದೆ. ಅಭ್ಯರ್ಥಿಯ ಗರಿಷ್ಠ ವಯಸ್ಸು 9-02-2026ರಂತೆ 30 ವರ್ಷಗಳು.
ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳು 3 ವರ್ಷ, ಎಚ್‌ಸಿ/ಎಸ್‌ಟಿ 5 ವರ್ಷ, ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ, ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷ ಸಡಿಲಿಕೆ ಇರಲಿದೆ.
ಅರ್ಜಿ ಸಲ್ಲಿಸು ವಿಧಾನಗಳು
* NHAI ನೇಮಕಾತಿ https://pdfjobsjankari.com/nhai-recruitment-2026-apply-for-40-deputy-manager-vacancies/ ಈ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ
* https://vacancyportal.nhai.org/DeputyMgrGateCivil/UserManager/User/index.aspxಗೆ ಭೇಟಿ ನೀಡಿ.
* NHAI ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾದ ವಿವರಗಳನ್ನು ಭರ್ತಿ ಮಾಡಿ.
* ಅಗತ್ಯ ಪ್ರಮಾಣ ಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್ಲೋಡ್ ಮಾಡಿ.
* ಎಲ್ಲಾ ಪ್ರಕ್ರಿಯೆ ಮುಗಿದ ಬಳಿಕ ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 9ರ ಒಳಗೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ. ಹೀಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆಗಾಗ ನೇಮಕಾತಿ ಬಗ್ಗೆ ಅಪ್ಡೇಟ್ ಮಾಹಿತಿ ಒದಗಿಸುತ್ತಿರುತ್ತದೆ. ಇದೀಗ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಭಾರತ ಸರ್ಕಾರದ ಅಡಿಯಲ್ಲಿ ಉದ್ಯೋಗ ಮಾಡಬಯಸುವವರಿಗೆ ಇದೊಂದು ಉತ್ತಮ ಅವಕಾಶ ಅಂತಲೇ ಹೇಳಬಹುದು.












Click it and Unblock the Notifications