NHAI recruitment; 6 ಹುದ್ದೆ, 37 ಸಾವಿರ ರೂ. ವೇತನ

ಬೆಂಗಳೂರು, ಏಪ್ರಿಲ್ 24; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮುಖ್ಯ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು ಆನ್‌ಲೈನ್ & ಆಫ್‌ಲೈನ್ ಮೂಲಕ ಜೂನ್ 2ರ ತನಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

6 ಮುಖ್ಯ ಜನರಲ್ ಮ್ಯಾನೇಜರ್ (ತಾಂತ್ರಿಕ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 37,400-2,18,200 ರೂ.ಗಳು ಎಂದು ಅಧಿಸೂಚನೆ ತಿಳಿಸಿದೆ.

NHAI Recruitment Apply For 6 Chief General Manager Post

ಎನ್‌ಎಚ್‌ಎಐ ನೇಮಕಾತಿ ಅಧಿಸೂಚನೆಯ ಅನ್ವಯ ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪದವಿ, ಬಿಇ/ ಬಿ.ಟೆಕ್ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು. ಅರ್ಜಿ ಸಲ್ಲಿಸುವವರಿಗೆ ಜೂನ್ 2ಕ್ಕೆ ಅನ್ವಯವಾಗುವಂತೆ 56 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಏಪ್ರಿಲ್ 19 ರಿಂದ ಆಸಕ್ತರು ಎನ್‌ಎಚ್‌ಎಐ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

NHAI Recruitment Apply For 6 Chief General Manager Post

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದವರು. ಅಗತ್ಯ ದಾಖಲೆಗಳನ್ನು GM (HR & Admn)-IIC, National Highways Authority of India, Plot No.G5-&6, Sector-10, Dwarka, New Delhi-110075 ಇವರಿಗೆ 7 ದಿನಗಳ ಒಳಗೆ ಕಳಿಸಬೇಕು. ಸರ್ಚ್ ಮತ್ತು ಸೆಲೆಕ್ಷನ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಅರ್ಜಿ ಅಂತಿಮಗೊಳಿಸಲಾಗುತ್ತದೆ.

ಆಸಕ್ತ ಮತ್ತು ಅರ್ಹರು ಹೆಚ್ಚಿನ ಮಾಹಿತಿಗಾಗಿ nhai.gov.in ವೆಬ್‌ಸೈಟ್‌ಗೆ ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+