• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ

|
Google Oneindia Kannada News

ಬೆಂಗಳೂರು, ನವೆಂಬರ್ 08; ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 30 ಕೊನೆಯ ದಿನವಾಗಿದೆ.

ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) 73 ಮತ್ತು ಡೆಪ್ಯೂಟಿ ಮ್ಯಾನೇಜರ್ (ಎಫ್‌ & ಎ) 17 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಹಾಸನದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಹಾಕಿ ಹಾಸನದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಹಾಕಿ

ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) ಹುದ್ದೆಗೆ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಕೆ ಮಾಡಬಹುದು. ಡೆಪ್ಯೂಟಿ ಮ್ಯಾನೇಜರ್ (ಎಫ್‌ & ಎ) ಹುದ್ದೆಗೆ ವಾಣಿಜ್ಯ ಶಾಸ್ತ್ರದಲ್ಲಿ ಪದವಿ, ಸಿಎ, ಎಂಬಿಎ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

ಕೊಡಗು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೊಡಗು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆಯಾದ ಅಭ್ಯರ್ಥಿಗಳಿಗೆ 15,600 ರಿಂದ 177500 ರೂ. ತನಕ ವೇತನ ನಿಗದಿ ಮಾಡಲಾಗಿದೆ. ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) ಹುದ್ದೆಗೆ 30 ಮತ್ತು ಡೆಪ್ಯೂಟಿ ಮ್ಯಾನೇಜರ್ (ಎಫ್‌ & ಎ) 35 ವರ್ಷಗಳ ವಯೋಮಿತಿ ಇದೆ.

ಗ್ರಾಮ ಲೆಕ್ಕಿಗರ ನೇಮಕಾತಿಗೆ ಒಪ್ಪಿಗೆ; ಯಾವ ಜಿಲ್ಲೆಗೆ ಎಷ್ಟು ಹುದ್ದೆ? ಗ್ರಾಮ ಲೆಕ್ಕಿಗರ ನೇಮಕಾತಿಗೆ ಒಪ್ಪಿಗೆ; ಯಾವ ಜಿಲ್ಲೆಗೆ ಎಷ್ಟು ಹುದ್ದೆ?

ಒಬಿಸಿ ಅಭ್ಯರ್ಥಿಗಳಿಗೆ 3, ಎಸ್‌ಸಿ/ ಎಸ್‌ಟಿ 5, ಅಂಗವಿಕಲ 10, ಅಂಗವಿಕಲ (ಒಬಿಸಿ) 13, ಅಂಗವಿಕಲ (ಎಸ್‌ಸಿ/ ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ, ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ 18004253800, 08026599990/0120-2497771 ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ nhai.gov.in ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಜೆಸಿಬಿ ಚಾಲನಾ ತರಬೇತಿ; ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ದಾಂಡೇಲಿ ಹಾಗೂ ಜೆಸಿಬಿ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಕರೆಯಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವಯೋಮಿತಿಯ ಯುವಕರಾಗಿರಬೇಕು. ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಮಾಹಿತಿಯ ನವೆಂಬರ್ 10ರೊಳಗೆ ಸಲ್ಲಿಸಬೇಕು.

ಅರ್ಜಿಯನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ-581325 ಈ ವಿಳಾಸಕ್ಕೆ ಕಳಿಸಬೇಕು. ಹೆಚ್ಚಿನ ಮಾಹಿತಿಗೆ 08284-298547, 9449782425, 6363429889 ಸಂಖ್ಯೆಗೆ ಕರೆ ಮಾಡಬಹುದಾಗಿದೆ. ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.

ತರಬೇತಿಗೆ ಹೆಸರು ನೋಂದಾಯಿಸಿ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ 45 ದಿನಗಳ ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.

ಆಸಕ್ತರು ನವೆಂಬರ್ 12 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಆಸಕ್ತರು ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2515944 ಸಂಪರ್ಕಿಸಬಹುದು.

ಅರಿವು ಮೂಡಿಸುವ ಕಾರ್ಯಕ್ರಮ; ಶಿವಮೊಗ್ಗ ಜಿಲ್ಲೆಯಲ್ಲಿ ಹೊಸದಾಗಿ ಉದ್ದಿಮೆ ಆರಂಭಿಸಲು ಆಸಕ್ತ ನಿರುದ್ಯೋಗಿ ಯುವಕ/ ಯುವತಿಯರಿಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ವಿವಿಧ ಯೋಜನೆಗಳು/ ಕಾರ್ಯಕ್ರಮಗಳ ಕುರಿತು ಉದ್ಯಮಶೀಲತಾ ಅರಿವು ಮೂಡಿಸುವ ಒಂದು ದಿನದ ಕಾರ್ಯಕ್ರಮವನ್ನು ನವೆಂಬರ್‌ ತಿಂಗಳಿನಲ್ಲಿ ಆಯೋಜಿಸಲಾಗುತ್ತೆ.

   Pakistanದಲ್ಲಿ Petrol ಬೆಲೆ ಎಷ್ಟು ಗೊತ್ತಾ | Oneindia Kannada

   ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವವರು ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಪ್ಪನಾಯಕ ಸಂಕಿರಣ, 3ನೇ ಮಹಡಿ, ನೆಹರು ರಸ್ತೆ, ಶಿವಮೊಗ್ಗ ಕಚೇರಿಯನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 23 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08182-222802 ಸಂಖ್ಯೆಗೆ ಕರೆ ಮಾಡಬಹುದು.

   English summary
   National Highways Authority of India invited applications for deputy manager posts. Candidates can apply till November 30, 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X