ಎನ್‌ಎಚ್‌ಎಐ ನೇಮಕಾತಿ; 15 ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಫೆಬ್ರವರಿ 21; ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) 15 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 17, 2022ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಜನರಲ್ ಮ್ಯಾನೇಜರ್ (ತಾಂತ್ರಿಕ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಒಟ್ಟು 15 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಎನ್‌ಎಚ್‌ಎಐ ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 37,400 ರಿಂದ 67,000 ರೂ. ತನಕ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ 14 ವರ್ಷಗಳ ಅನುಭವ ಪೇ ಬಾಂಡ್ 3 ಅಥವ ತತ್ಸಮಾನ/ ಹೆಚ್ಚಿನ ಹುದ್ದೆಯಲ್ಲಿ ಕೆಲಸ ಮಾಡಿದ ಅನುಭವ ಇರಬೇಕು. 9 ವರ್ಷಗಳ ಕಾಲ ಹೆದ್ದಾರಿಯ ಮೂಲ ಸೌಕರ್ಯ ವಲಯದ ಪ್ರಾಜೆಕ್ಟ್‌ನಲ್ಲಿ, ರಸ್ತೆ, ಸೇತುವೆ ಕೆಲಸ ಮಾಡಿರಬೇಕು.
ಎನ್‌ಎಚ್‌ಎಐ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿ ಗರಿಷ್ಠ ವಯೋಮಿತಿ 56 ವರ್ಷಗಳು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ನಡೆಯಲಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು nhai.gov.in ವೆಬ್ ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸುವಾಗ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ದಾಖಲು ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ ಬಳಿಕ ಹಾರ್ಡ್ ಕಾಪಿಯನ್ನು ಸ್ವಯಂ ದೃಢೀಕೃತ ದಾಖಲೆಗಳ ಜೊತೆ ಸಲ್ಲಿಕೆ ಮಾಡಬೇಕು. ಅರ್ಜಿಗಳನ್ನು DGM (HR & Admn.)-IA, National Highways Authority of India, Plot No: G - 5 & 6, Sector - 10, Dwarka, New Delhi - 110075 ಇವರಿಗೆ ಸಲ್ಲಿಸಬೇಕು.
ಸಿಬ್ಬಂದಿಗಳ ನೇಮಕಾತಿ; ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಗಳ ಅವಶ್ಯಕತೆ ಇದೆ. ಜಿಲ್ಲಾ ಖನಿಜ ಪ್ರತಿಷ್ಠಾನದ ಅಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ವಿಜಯನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷರಾದ ಅನಿರುದ್ಧ ಶ್ರವಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) 1 ಹುದ್ದೆ, ಮುಖ್ಯಲೆಕ್ಕ ವ್ಯವಸ್ಥಾಪಕರು (ಚೀಫ್ ಅಕೌಂಟೆಂಟ್ ಆಫೀಸರ್ 1, ಸಹಾಯಕ ಲೆಕ್ಕ ಅಧಿಕಾರಿ 2, ಇಂಟರ್ನ್‍ಶಿಫ್ 4, ಡಾಟಾ ಎಂಟ್ರಿ ಆಪರೇಟರ್ 3, ಕಚೇರಿ ಸಹಾಯಕರು 5 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಆಸಕ್ತರು ಫೆಬ್ರವರಿ 21ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 3. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು vijayanagara.nic.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಆನ್‍ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ವಿದ್ಯಾರ್ಹತೆ, ಸೇವಾ ಅನುಭವ ಮತ್ತು ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿರುವ ದಾಖಲೆಗಳನ್ನು ಕಡ್ಡಾಯವಾಗಿ ಅಪ್‍ಲೋಡ್ ಮಾಡಬೇಕು. ಅಸ್ಪಷ್ಟ ದಾಖಲೆಗಳು ಮತ್ತು ಅಪೂರ್ಣ ಮಾಹಿತಿ ಸಲ್ಲಿಸಿದ ಅರ್ಜಿ ತಿರಸ್ಕಾರವಾಗಲಿದೆ.
ವಿದ್ಯಾರ್ಹತೆ, ಹುದ್ದೆಯ ಸ್ವರೂಪ, ಆಯ್ಕೆ ಮಾನದಂಡಗಳ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08392-295655 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications