NIANP Recruitment 2023: ಈ ಹುದ್ದೆಗಳು ಖಾಲಿ ಇವೆ, ಸೆ.26ಕ್ಕೆ ಬೆಂಗಳೂರಿನಲ್ಲೇ ಸಂದರ್ಶನ, ಪಾಲ್ಗೊಳ್ಳಲು ವಿವರ ನೋಡಿ

ಬೆಂಗಳೂರು, ಸೆಪ್ಟಂಬರ್ 22: ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಯು (NIANP) ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಈ ಅಕವಾಶದ ಸದುಪಯೋಗ ಮಾಡಿಕೊಳ್ಳುವಂತೆ ಕೋರಲಾಗಿದೆ.

ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯಲ್ಲಿ (NIANP) 2 ಯಂಗ್ ಪ್ರೊಫೆಶನಲ್-I ಹುದ್ದೆಗಳು ಖಾಲಿ ಇದ್ದು, ಆಸಕ್ತರು ಸೆಪ್ಟಂಬರ್ ಸೆಪ್ಟೆಂಬರ್ 26 ರೊಳಗೆ ಅರ್ಜಿ ಸಲ್ಲಿಸಬೇಕು. ಅಂದರೆ ಸೆಪ್ಟಂಬರ್ 26ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಸಂದರ್ಶನದಲ್ಲಿ ಪಾಲ್ಗೊಳ್ಳುವ ಮುನ್ನ ಅಭ್ಯರ್ಥಿಗಳು ನೇಮಕಾತಿ ಕುರಿತು ಪೂರ್ತಿ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

nianp-recruitment-2023

ನೇಮಕಾತಿ ಪ್ರಕ್ರಿಯೆ ಮಾಹಿತಿ

ಸಂಸ್ಥೆ ಹೆಸರು: ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ

ಹುದ್ದೆ ಹೆಸರು: ಯಂಗ್ ಪ್ರೊಫೆಶನಲ್-I

ಖಾಲಿ ಹುದ್ದೆ ಸಂಖ್ಯೆ: 2

ಶೈಕ್ಷಣಿಕ ಅರ್ಹತೆ: ಪದವಿ

ಮಾಸಿಕ ವೇತನ: 25,000 ರೂಪಾಯಿ

ಸಂದರ್ಶನ ದಿನ: ಸೆಪ್ಟೆಂಬರ್ 26

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಇದರೊಂದಿಗೆ ಲ್ಯಾಬೊರೇಟರಿಯಲ್ಲಿ ರಿಸರ್ಚ್​ ಅನುಭವ ಪಡೆದಿರಬೇಕು.

nianp-recruitment-2023

ಇನ್ನೂ ಸಂದರ್ಶನದಲ್ಲಿ ಆಯ್ಕೆ ಆಗುವವರಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಿ ಮಾಸಿಕ 25,000 ರೂಪಾಯಿ ವೇತನ ನೀಡಲಾಗುವುದು ಎಂದು ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ ಹೇಳಿದೆ.

ವಯೋಮಿತಿ ಮಾಹಿತಿ

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ನೋಡುವುದಾದರೆ, ಇದೇ ಸೆಪ್ಟೆಂಬರ್ 26ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ಇರಬೇಕು ಎಂದು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು ಎಂದು ತಿಳಿಸಲಾಗಿದೆ.

ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುವುದು. ನಂತರ ಇದೇ ಸೆಪ್ಟಂಬರ್ 26ರಂದು ಸಂದರ್ಶನ ಮೂಲಕ ಸಂಸ್ಥೆ ಆಯ್ಕೆ ಮಾಡಿಕೊಳ್ಳಲಿದೆ. ಸಮಿತಿ ಕೊಠಡಿ, ಆಡಳಿತಾತ್ಮಕ ಬ್ಲಾಕ್, ICAR-ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ & ಫಿಸಿಯಾಲಜಿ ಆಡುಗೋಡಿ, ಬೆಂಗಳೂರು-560030 ಇಲ್ಲಿ ಸಂದರ್ಶನ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+