150 ಅಕೌಂಟ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಐಸಿಎಲ್

ಬೆಂಗಳೂರು, ನವೆಂಬರ್ 15 : ನ್ಯಾಷನಲ್ ಇನ್ಷೂರೆನ್ಸ್‌ ಕಂಪನಿ ಲಿಮಿಟೆಡ್‌ 150 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 27/11/2018 ಕೊನೆಯ ದಿನವಾಗಿದೆ.

ನ್ಯಾಷನಲ್ ಇನ್ಷೂರೆನ್ಸ್‌ ಕಂಪನಿ ಲಿಮಿಟೆಡ್‌ (ಎನ್‌ಐಸಿಎಲ್) ಅಕೌಂಟ್ಸ್ ಅಪ್ರೇಂಟೀಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಾಣಿಜ್ಯ ವಿಷಯದಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶೇ 55ರಷ್ಟು ಅಂಕಗಳು).

NICL Recruitment 2018 : Apply for 150 Accounts Posts

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 21 ವರ್ಷಗಳು. ಗರಿಷ್ಠ ವಯೋಮಿತಿ 27 ವರ್ಷಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ 30 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+