ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

150 ಅಕೌಂಟ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಐಸಿಎಲ್

|
Google Oneindia Kannada News

ಬೆಂಗಳೂರು, ನವೆಂಬರ್ 15 : ನ್ಯಾಷನಲ್ ಇನ್ಷೂರೆನ್ಸ್‌ ಕಂಪನಿ ಲಿಮಿಟೆಡ್‌ 150 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 27/11/2018 ಕೊನೆಯ ದಿನವಾಗಿದೆ.

ನ್ಯಾಷನಲ್ ಇನ್ಷೂರೆನ್ಸ್‌ ಕಂಪನಿ ಲಿಮಿಟೆಡ್‌ (ಎನ್‌ಐಸಿಎಲ್) ಅಕೌಂಟ್ಸ್ ಅಪ್ರೇಂಟೀಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಹಾಸನದಲ್ಲಿ ನವೆಂಬರ್ 24ರಂದು ಉದ್ಯೋಗ ಮೇಳಹಾಸನದಲ್ಲಿ ನವೆಂಬರ್ 24ರಂದು ಉದ್ಯೋಗ ಮೇಳ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಾಣಿಜ್ಯ ವಿಷಯದಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶೇ 55ರಷ್ಟು ಅಂಕಗಳು).

ವಿವಿಧ ಹುದ್ದೆಗಳಿಗೆ ಅರ್ಜಿ ಕರೆದ ವಿಐಟಿಎಂ, ಬೆಂಗಳೂರಲ್ಲಿ ಕೆಲಸವಿವಿಧ ಹುದ್ದೆಗಳಿಗೆ ಅರ್ಜಿ ಕರೆದ ವಿಐಟಿಎಂ, ಬೆಂಗಳೂರಲ್ಲಿ ಕೆಲಸ

NICL Recruitment 2018 : Apply for 150 Accounts Posts

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 21 ವರ್ಷಗಳು. ಗರಿಷ್ಠ ವಯೋಮಿತಿ 27 ವರ್ಷಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ 30 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.

ಯುಪಿಎಸ್ ಸಿಯಲ್ಲಿ 417 ಹುದ್ದೆಗಳಿಗೆ ಅರ್ಜಿ ಆಹ್ವಾನಯುಪಿಎಸ್ ಸಿಯಲ್ಲಿ 417 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
National Insurance Company Ltd (NICL) recruitment 2018-19. Notification has been released on official website for the recruitment of 150 Accounts posts. The candidate who is looking for Accounts Post can apply application before 27.11.2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X